ಅಕ್ರಮ ಮದ್ಯ ಮಾರಾಟ: ಬಂಧನ
ನರಸಿಂಹರಾಜಪುರ: ಅಕ್ರಮ ಮದ್ಯ ಮಾರಾಟದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, 90 ಪ್ಯಾಕೇಟ್ ಮದ್ಯ ವಶಪಡಿಸಿಕೊಂಡಿದ್ದಾರೆ. ಭಾನುವಾರ ರಾತ್ರಿ ಬೈರಾಪುರ- ಮಾರಿದಿಬ್ಬ ಗ್ರಾಮದ ಮೀನು ಮಾರುಕಟ್ಟೆ ಮಳಿಗೆಯಲ್ಲಿ ವಿಸ್ಕಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿ ಬೀರುವನ್ನು ಬಂಧಿಸಿದರು. ಸ್ಥಳದಲ್ಲಿದ್ದ ರು. 2225 ಬೆಲೆ ಬಾಳುವ 90 ವಿಸ್ಕಿ ಪ್ಯಾಕೇಟ್, ರು. 200 ನಗದನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಿದ್ದಾರೆ.
ಕಾರ್ಮೆಲ್ ಮಾತೆಯ ದಿನಾಚರಣೆ
ನರಸಿಂಹರಾಜಪುರ: ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸನ್ಯಾಸಿನಿಯರ ಸೇವೆ ಶ್ಲಾಘನೀಯ ಎಂದು ಜಿಪಂ ಮಾಜಿ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು. ತಾಲೂಕಿನ ಮೆಣಸೂರು ಮೌಂಟ್ ಕಾರ್ಮೆಲ್ ಪಪೂ ಕಾಲೇಜು, ಕಾರ್ಮೆಲ್ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ನಡೆದ ಸಂತ ಕಾರ್ಮೆಲ್ ಮಾತೆ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭದ್ರಾವತಿ ಧರ್ಮ ಪ್ರಾಂತದ ಫಾದರ್ ಜಾರ್ಜ್ ವಟ್ಟಿಕಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲೆ ಸಿಸ್ಟರ್ ಶಾಲಿ ಅಧ್ಯಕ್ಷತ ವಹಿಸಿದ್ದರು. ಸಿಸ್ಟರ್ಜಾನಿ ಜೋಸ್, ಮುಖ್ಯೋಪಾಧ್ಯಾಯಿನಿ ಸಿಸ್ಟರ್ಬೀನಾ, ಸಹನಾ, ನವ್ಯಶ್ರೀ, ಉಪನ್ಯಾಸಕರಾದ ಸ್ವಪ್ನ ಹೆಗಡೆ, ಐ.ಎಂ.ರಾಜೀವ್ ಇತರರು ಉಪಸ್ಥಿತರಿದ್ದರು.
ಅಣ್ಣಪ್ಪ ಮಳೀಮಠ್ಗೆ ಪಿಎಚ್ಡಿ
ನರಸಿಂಹರಾಜಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕ ಅಣ್ಣಪ್ಪ ಎನ್.ಮಳೀಮಠ್ ಅವರಿಗೆ ಪಿ.ಎಚ್.ಡಿ. ಪದವಿ ದೊರಕಿದೆ. ಕುವೆಂಪು ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಡಾ.ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡು ಅಣ್ಣಪ್ಪ ಅವರು ಮಂಡಿಸಿದ ಸ್ವಾತಂತ್ರ ಚಳವಳಿ ಮತ್ತು ಆಧುನಿಕ ಕನ್ನಡ ಸಾಹಿತ್ಯ 1857-1960 ಎಂಬ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

