ಕರವೇ ಮಹಿಳಾ ಘಟಕದಿಂದ ಪ್ರತಿಭಟನೆ
ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಪರಮೇಶ್ ನೇತೃತ್ವದಲ್ಲಿ ಆಜಾದ್‌ಪಾರ್ಕ್ ವೃತ್ತದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ ಪರಮೇಶ್, ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ಒಂಟಿಯಾಗಿ ಓಡಾಡದ ಸ್ಥಿತಿ ನಿರ್ಮಾಣಗೊಂಡಿದೆ ಎಂದರು.
ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಕಠಿಣ ಕಾನೂನಿನ ಭಯ ಇಲ್ಲದಿರುವುದರಿಂದಾಗಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದ ಅವರು. ಅತ್ಯಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೂಡಲೇ ಕಠಿಣ ಕಾನೂನು ಜಾರಿಗೆ ತರುವುದರ ಜೊತೆಗೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಹಾಯಕ ಶ್ರೀನಿವಾಸ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಘಟಕದ ಜಿಲ್ಲಾ ಉಪಾಧ್ಯಕ್ಷೆ ಸುಮ, ಪ್ರಧಾನ ಕಾರ್ಯದರ್ಶಿ ಎಸ್.ಆರ್. ನಂದಿನಿ, ಮೂಡಿಗೆರೆ ತಾ. ಅಧ್ಯಕ್ಷೆ ಹೇಮಾವತಿ, ನರಸಿಂಹರಾಜಪುರ ತಾ. ಅಧ್ಯಕ್ಷೆ ಪ್ರೇಮ, ಚಿಕ್ಕಮಗಳೂರು ತಾ. ಅಧ್ಯಕ್ಷೆ ನಾಗಲತಾ, ಕಡೂರು ತಾ. ಅಧ್ಯಕ್ಷೆ ಶೈಲಶ್ರೀ ಸಿದ್ದಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

