ರಂಭಾಪುರಿ ಶ್ರೀಗಳ ಶ್ರಾವಣ ತಪೋನುಷ್ಠಾನ 27 ರಿಂದ
ಬಾಳೆಹೊನ್ನೂರು: ಸನಾತನ ಪಂಚಪೀಠಗಳಲ್ಲಿ ಒಂದಾದ ಇಲ್ಲಿನ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿಯವರ 23ನೇ ವರ್ಷದ ಶ್ರಾವಣ ತಪೋನುಷ್ಠಾನ ಹಾಗೂ ಧರ್ಮ ಸಮಾರಂಭ ಜು. 27 ರಿಂದ ಆಗಸ್ಟ್ 25 ರವರೆಗೆ ರಂಭಾಪುರಿ ಪೀಠದಲ್ಲಿ ನಡೆಯಲಿದೆ.
ಲೋಕ ಕಲ್ಯಾಣ ಹಾಗೂ ವಿಶ್ವಶಾಂತಿಗಾಗಿ ರಂಭಾಪುರೀ ಶ್ರೀಗಳು ಶ್ರಾವಣ ಮಾಸದ ಪರ್ವಕಾಲದಲ್ಲಿ ಪ್ರತಿ
ನಿತ್ಯ ತ್ರಿಕಾಲ ಇಷ್ಟಲಿಂಗ ಪೂಜಾ ತಪೋನುಷ್ಠಾನ ನಡೆಸುವರು. ಶ್ರೀಪೀಠದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ನಿತ್ಯ ಸಂಜೆ 7 ಘಂಟೆಗೆ ರೇಣುಕ ವಿಜಯ ಪ್ರವಚನ ಶಿಕ್ಷಕ ಪಂಚಾಕ್ಷರ ಕುಮಾರ್ ಅವರಿಂದ ನಡೆಯಲಿದೆ.
ಈ ಸಂದರ್ಭದಲ್ಲಿ ಪಟ್ಟಾಧ್ಯಕ್ಷರು ಹಾಗೂ ವಾಗ್ಮಿಗಳಿಂದ ನುಡಿ ಸೇವೆ, ಕವಿ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿ ಸೋಮವಾರ ಮತ್ತು ಗುರುವಾರ ಜಗದ್ಗುರುಗಳು ಧರ್ಮ ಸಭೆಗೆ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಜು. 31 ರಂದು ಪೀಠದ ಲಿಂ. ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಆಗಸ್ಟ್ 8 ರಂದು ಲಿಂ. ವೀರರುದ್ರಮುನಿದೇವ ಶಿವಾಚಾರ್ಯರ ಲಿಂಗಾಂಗ ಸಾಮರಸ್ಯದ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಲಿದೆ.
ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಪರ್ಯಂತ ಪ್ರಾಥ: ಕಾಲದಲ್ಲಿ ಜಗದ್ಗುರು ರೇಣುಕಾಚಾರ್ಯರಿಗೆ, ಕ್ಷೇತ್ರನಾಥ ವೀರಭದ್ರಸ್ವಾಮಿಗೆ, ಶಕ್ತಿಮಾತೆ ಚೌಡೇಶ್ವರಿಗೆ ಹಾಗೂ ರಂಭಾಪುರೀ ಪೀಠದ ಲಿಂ. ಜಗದ್ಗುರುಗಳ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಲ ವಿಶೇಷ ಪೂಜೆ ನಡೆಯುತ್ತವೆ.
ಶ್ರಾವಣ ಸಂದರ್ಭದಲ್ಲಿ ಪೀಠಕ್ಕೆ ಆಗಮಿಸುವ ಭಕ್ತರಿಗಾಗಿ ವಸತಿ ಹಾಗೂ ತ್ರಿಕಾಲ ಉಚಿತ ಪ್ರಸಾದದ ವ್ಯವಸ್ಥೆ ಇರುತ್ತದೆ ಎಂದು ಶ್ರೀಮಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

