ಚಿಕ್ಕಮಗಳೂರು

ಉತ್ತಮ ಆರೋಗ್ಯ ನಿಜವಾದ ಸಂಪತ್ತು'

Published On :

ಶೃಂಗೇರಿ: ಆರೋಗ್ಯವೇ ಮನುಷ್ಯನ ನಿಜವಾದ ಸಂಪತ್ತು. ಉತ್ತಮ ಆರೋಗ್ಯದಿಂದ ಮಾನಸಿಕ ದೃಢತೆ ಬೆಳೆಯುತ್ತದೆ ಎಂದು ಜೆಸಿಐ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ವೈಕುಂಠಪುರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗುವ ಸಂಕಲ್ಪ ಕೈಗೊಳ್ಳಬೇಕು. ಇದರಿಂದ ಸಮಾಜ ಸ್ವಾಸ್ಥ್ಯವೂ ಉನ್ನತಿಗೇರುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸುಸಂಸ್ಕೃತಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ಮುಖ್ಯ ಶಿಕ್ಷಕಿ ಸುವರ್ಣ ವಿಜಯಕುಮಾರ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಬೇಕು. ಒಮ್ಮೆ ದುಶ್ಚಟಗಳಿಗೆ ಬಲಿಯಾದರೆ ಅದರಿಂದ ಹೊರಬರುವುದು ಕಷ್ಟ. ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯಲ್ಲಿ ತಪ್ಪು ಮಾಡುತ್ತಾನೆ. ಅದನ್ನು ತಿದ್ದಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಉದಯ್, ಶಾಲಾಭಿವೃದ್ಧಿ ಸಮಿತಿ ಸದಸ್ಯೆ ಸುಮಾ ಮತ್ತಿತರರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.