ಚಿಕ್ಕಮಗಳೂರು

ಜೆಡಿಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ ನಾಳೆ

Published On :

ಚಿಕ್ಕಮಗಳೂರು: ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜು. 25 ರಂದು ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜಪ್ಪ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಭೆಯಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಯಲಿದೆ.ಸಭೆಯಲ್ಲಿ ಶಾಸಕರಾದ ಬಿ.ಬಿ. ನಿಂಗಯ್ಯ, ವೈಎಸ್‌ವಿ ದತ್ತ, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ಮುಖಂಡರಾದ ಎಚ್.ಟಿ. ರಾಜೇಂದ್ರ, ಎಸ್.ಎಲ್. ಭೋಜೇಗೌಡ, ಎಚ್.ಎಚ್. ದೇವರಾಜ್ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆ ಯಶಸ್ವಿಗೊಳಿಸುವಂತೆ ಮಂಜಪ್ಪ ತಿಳಿಸಿದ್ದಾರೆ.
'ಅಧಿಕಾರ ನಿಮಿತ್ತ, ಅಭಿವೃದ್ಧಿ ಶಾಶ್ವತ'
ಚಿಕ್ಕಮಗಳೂರು:  ಅಭಿವೃದ್ಧಿ ಹಾಗೂ ಜನಪರ ಕೆಲಸಗಳಿಂದ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ. ನಾವು, ನಮ್ಮ ಸ್ಥಾನ ಅಶಾಶ್ವತ, ಅಧಿಕಾರವಧಿಯಲ್ಲಿ ಮಾಡುವ ಕೆಲಸಗಳು ಮಾತ್ರ ಶಾಶ್ವತ ಎಂದು ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಮಂಜಣ್ಣ ತಿಳಿಸಿದರು. ನಗರದ ಕೆಂಪನಹಳ್ಳಿಯ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾಗಿರುವ ನಗರಸಭಾ ಅಧ್ಯಕ್ಷರಾದ ಪುಷ್ಪರಾಜ್ ಹಾಗೂ ತಾಲೂಕು ಪಂಚಾಯಿತಿ ಸದಸ್ಯರಾದ ಪುಟ್ಟೇಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು. ಜನಾಂಗದ ಹೆಸರು ಉಳಿಯುವಂತೆ ಜನಪರ ಕೆಲಸ ನಿರ್ವಹಿಸಿ, ಸಮಾಜಕ್ಕೆ ಜನಾಂಗವು ಮಾದರಿಯಾಗುವಂತೆ ಆಡಳಿತ ನೀಡಬೇಕು ಎಂದರು. ಚುನಾವಣಾ ಸಂದರ್ಭದಲ್ಲಿ ಮಾತ್ರ ಪಕ್ಷಗಳು, ನಂತರ ಪಕ್ಷಭೇದ ಮರೆತು ಅಭಿವೃದ್ಧಿ ಕೆಲಸಗಳ ಜತೆಗೆ ಜನಾಂಗದ ಅಭಿವೃದ್ಧಿಗೂ ಶ್ರಮಿಸಿ ಜನರ ಸಮಸ್ಯೆಗೆ ಸ್ಪಂದಿಸಬೇಕು. ನಗರದ ರಸ್ತೆಗಳು ಮಳೆಗಾಲದಲ್ಲಿ ಹದಗೆಡುವುದರಿಂದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ನಗರಸಭೆ ಅಧ್ಯಕ್ಷ ಪುಷ್ಪರಾಜ್ ಮಾತನಾಡಿ, ನಮ್ಮ ಜನಾಂಗದವರು ಸಹ ಬಿಜೆಪಿಯಲ್ಲಿ ಉತ್ತಮ ಅವಕಾಶ ಪಡೆದಿದ್ದಾರೆ. ಶಾಸಕ ಸಿ.ಟಿ. ರವಿ ಅವರು ಜನಾಂಗದವರ ಸಂಖ್ಯೆ ಆಧಾರದಲ್ಲಿ ಪ್ರಾತಿನಿಧ್ಯ ನೀಡಿ ನಗರಸಭೆ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಉತ್ತಮ ಸ್ಥಾನ ನೀಡಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಸದಸ್ಯ ಪುಟ್ಟೇಗೌಡ ಮಾತನಾಡಿ, ಜನಪರ ಕೆಲಸ ಮಾಡುವಾಗ ಜಾತಿ- ಧರ್ಮ ಪರಿಗಣನೆಗೆ ತೆಗೆದುಕೊಳ್ಳದೆ ಮಾಡುವಂತೆ ನಮ್ಮ ಪಕ್ಷ ನಮಗೆ ತಿಳಿಸಿದ್ದು, ಅದರಂತೆ ಪಕ್ಷಭೇದ ಮರೆತು ಶ್ರಮಿಸುತ್ತೇನೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಅನುದಾನ ನೀಡಲಾಗಿದೆ ಎಂದರು. ನಿವೃತ್ತ ಶಿಕ್ಷಕರಾದ ಸಣ್ಣೇಗೌಡ, ಶಶಿಧರ್, ಬಸಂತ್‌ಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.