ಬಿಸಿಯೂಟ ಕಾರ್ಯಕರ್ತೆಯರ ಸೇವೆ ಕಾಯಂಗೊಳಿಸಿ'
ಚಿಕ್ಕಮಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ (ಬಿಸಿಯೂಟ) ಕಾರ್ಯಕರ್ತೆಯರು ಜಿಲ್ಲಾ ಪಂಚಾಯ್ತಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಜಿಲ್ಲಾದ್ಯಂತ ಬಿಸಿಯೂಟ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ, ಜಿಲ್ಲಾಡಳಿತ, ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಕಾರ್ಯಕರ್ತೆಯರಿಗೆ ನೀಡಬೇಕಾಗಿದ್ದ ಹೆಚ್ಚುವರಿ ರು. 500 ಹಾಗೂ ಹಾಲಿನ ಬಾಬ್ತು ರು. 100 ಗಳನ್ನು ಜಿಲ್ಲೆಯ ಹಲವಾರು ಶಾಲೆಗಳಿಗೆ ಈವರೆಗೂ ಬಿಡುಗಡೆ ಮಾಡಿಲ್ಲ. ಕಡೂರು ತಾಲೂಕಿನಾದ್ಯಂತ ಅಡುಗೆಯವರ ಖಾತೆಗೆ ನೇರವಾಗಿ ವೇತನದ ಚೆಕ್ ನೀಡದೆ ವಿಳಂಬ ಮಾಡಲಾಗುತ್ತಿದೆ. ಈ ಸಂಬಂಧ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ವರ್ಷದಲ್ಲಿ 10 ದಿನ ರಜೆ ಕಡ್ಡಾಯಗೊಳಿಸಬೇಕು. ಶಾಲೆಗಳಿಗೆ ಪೂರೈಕೆ ಮಾಡುತ್ತಿರುವ ಅಕ್ಕಿ ಚೀಲಗಳಲ್ಲಿ 5 ರಿಂದ 8 ಕೆ.ಜಿ. ಅಕ್ಕಿ ಕಡಿಮೆ ಇದ್ದು, ಈ ಬಗ್ಗೆ ಹಲವು ಬಾರಿ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಲೆಗಳಿಗೆ ಕಡಿಮೆ ಅಕ್ಕಿ ಸರಬರಾಜು ಮಾಡುವವರ ಪರವಾನಿಗೆ ರದ್ದುಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಗ್ಯಾಸ್ ಕಂಪನಿಗಳು ಶಾಲೆಗಳಿಗೆ ಗ್ಯಾಸ್ ವಿತರಿಸಲು ಹಣ ಪಡೆಯುತ್ತಿದ್ದರೂ ರಸ್ತೆ ಮಧ್ಯದಲ್ಲಿ ಗ್ಯಾಸ್ ಸಿಲಿಂಡರ್ ಇಳಿಸಿ, ಅದನ್ನು ಅಡುಗೆಯವರು ತೆಗೆದುಕೊಂಡು ಹೋಗಬೇಕಾಗಿದೆ. ಇದನ್ನು ತಪ್ಪಿಸಬೇಕು. ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಘೋಷಿಸಿಬೇಕು. ವೈದ್ಯಕೀಯ ಮತ್ತು ಭವಿಷ್ಯ ನಿಧಿ ನಂತಹ ಸೌಲಭ್ಯಗಳನ್ನು ಜಾರಿಗೆ ತರುವಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಫೆಡರೇಷನ್ನ ಜಿಲ್ಲಾಧ್ಯಕ್ಷ ಜಿ.ರಘು, ತಾಲೂಕು ಅಧ್ಯಕ್ಷೆ ಇಂದುಮತಿ, ಕಡೂರು ತಾಲೂಕು ಅಧ್ಯಕ್ಷೆ ಪುಷ್ಪಾ, ಮೂಡಿಗೆರೆ ತಾಲೂಕು ಅಧ್ಯಕ್ಷೆ ತಹ್ಸೀನ್, ತರೀಕೆರೆ ತಾಲೂಕು ಅಧ್ಯಕ್ಷೆ ಚಂದ್ರಮ್ಮ, ಎನ್.ಆರ್.ಪುರ ತಾಲೂಕು ಅಧ್ಯಕ್ಷೆ ರತ್ನ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

