ಅನಿಷ್ಟ ತೊಲಗಿಸಲು ನೈತಿಕ ಶಿಕ್ಷಣ ಅಗತ್ಯ
ಚಿಕ್ಕಮಗಳೂರು: ಸಮಾಜದಲ್ಲಿ ಸಾಮಾಜಿಕ ಅನಿಷ್ಟ ಪದ್ಧತಿ ತೊಡೆದುಹಾಕಲು ನೈತಿಕ ಶಿಕ್ಷಣ ಅಗತ್ಯವಾಗಿದ್ದು, ಸಾಂಸ್ಕೃತಿಕ ಪರಂಪರೆ ಮತ್ತು ಉತ್ತಮ ನಾಗರಿಕತೆ ಬೆಳೆಸಿಕೊಳ್ಳುವಲ್ಲಿ ಎಲ್ಲರೂ ಪ್ರಜ್ಞಾವಂತರಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕರೆ ನೀಡಿದರು.
ನಗರದ ಮಲೆನಾಡು ವಿದ್ಯಾ ಸಂಸ್ಥೆಯ ಸುಂದರಮ್ಮ ಶಂಕರಮೂರ್ತಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಾಂಸ್ಕೃತಿಕ ಮತ್ತು ನೈಸರ್ಗಿಕವಾಗಿ ಉತ್ತಮ ವಾತಾವರಣವಿರುವ ಜಿಲ್ಲೆಯಲ್ಲಿ ಇಂತಹ ಹೆಸರಾಂತ ವಿದ್ಯಾ ಸಂಸ್ಥೆಗಳ ಮೂಲಕ ವಿದ್ಯಾಥಿಗಳು ಪ್ರತಿಭಾನ್ವಿತರಾಗಿ ಗುರಿ ಸಾಧಿಸಬೇಕು. ಸಮಾಜದಲ್ಲಿ ಯಾರು ಮೇಲು ಕೀಳಲ್ಲ, ಎಂಜಿನಿಯರ್, ಡಾಕ್ಟರ್ಗಳಾದರೆ ಗೌರವ ಸಿಗುತ್ತದೆ ಎಂಬ ಭ್ರಮೆ ಬೇಡ. ಎಲ್ಲ ಕ್ಷೇತ್ರಗಳಿಗೂ ತನ್ನದೆ ಆದ ಪ್ರಾಮುಖ್ಯತೆ ಇದೆ. ನಿಮಗೆ ಆಸಕ್ತಿ ಇರುವ ವಿಷಯದಲ್ಲಿ ಏಕಾಗ್ರತೆಯಿಂದ ವಿದ್ಯಾರ್ಥಿಗಳು ಗುರಿ ಸಾಧಿಸಿದರೆ ಆರೋಗ್ಯಕರ ಸಮಾಜ ಸೃಷ್ಟಿಯಾಗಲು ಸಹಕಾರಿ ಎಂದರು.
ಶಿಕ್ಷಣದಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ಹಿಂದೆ ಸಾಮಾಜಿಕ ಮತ್ತು ಆರ್ಥಿಕ ಕಾರಣಗಳಿಂದ ಕೆಲವರಿಗಷ್ಟೆ ಶಿಕ್ಷಣ ದೊರೆತು ಪ್ರಥಮ ಶ್ರೇಣಿಯಲ್ಲಿ ಪಾಸಾಗುವುದೇ ಮಹತ್ಕಾರ್ಯವಾಗಿತ್ತು. ಇಂದು ಹಾಗಿಲ್ಲ ವಿದ್ವತ್, ಓದಿನ ಆಸಕ್ತಿ ಹೆಚ್ಚಿದೆ. ಸಮಾಜದಲ್ಲಿ ಜಾತಿ, ಲಿಂಗ, ವರ್ಗ ಭೇದವಿಲ್ಲದೆ ವ್ಯಕ್ತಿಗೆ ಅವಕಾಶ ಸಿಕ್ಕರೆ ಸಾಧನೆ ಮಾಡಬಲ್ಲವರಿದ್ದಾರೆ. ಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕೆಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಗೆಗಳಲ್ಲಿ ಸಾಧನೆ ಮಾಡಿ ರಾಜ್ಯ, ದೇಶಾದ್ಯಂತ ವಿದ್ಯಾ ಸಂಸ್ಥೆಯ ಹೆಸರನ್ನು ವಿದ್ಯಾರ್ಥಿಗಳು ಬೆಳಗಿದ್ದಾರೆ ಎಂದರೆ ಆಡಳಿತ ಮಂಡಳಿ ಮತ್ತು ಬೋಧಕ ವರ್ಗದವರ ಶ್ರಮ ಅಡಗಿದೆ ಎಂದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅತಿಥಿಗಳು ಪುಷ್ಪಾರ್ಪಣೆ ಮಾಡಿ ಅಭಿನಂಧಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆ ಅಧ್ಯಕ್ಷ ಎಂ.ಎಸ್. ಅನಂತರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರಾದ ಜಿ.ಪಿ. ಪುಷ್ಪಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಎಂ. ಶಂಕರಮೂರ್ತಿ, ವ್ಯವಸ್ಥಾಪಕಿ ಶಾಂತಕುಮಾರಿ ವೇದಿಕೆಯಲ್ಲಿದ್ದರು. ತನ್ಮಯಿ, ನಮ್ರತಾ ಕಶ್ಶಪ್ ಪ್ರಾರ್ಥಿಸಿ, ಕೆ.ಎನ್. ಮಂಜುನಾಥ್ ಭಟ್ ಸ್ವಾಗತಿಸಿದರು. ಉಪನ್ಯಾಸಕ ಎಚ್.ಕೆ. ಸುಭಾಷ್ ನಿರೂಪಿಸಿ, ಎಂ.ಎಸ್. ಯತಿರಾಜ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

