ಮಲೆಕುಡಿಯಾ, ಡೊಂಗ್ರಿಗರೇಶಿಯಾ ಸಮುದಾಯಕ್ಕೆ ಸೌಲಭ್ಯ: ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು: ಅತ್ಯಂತ ಹಿಂದುಳಿದ ಪರಿಶಿಷ್ಟ ವರ್ಗದ ಮಲೆಕುಡಿಯಾ ಮತ್ತು ಡೊಂಗ್ರಿಗರೇಶಿಯಾ ಸಮುದಾಯದವರು ವಾಸಿಸುವ ಕಾಲೋನಿಗಳು ಮತ್ತು ಅವರ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬುಡಕಟ್ಟು ಜನಾಂಗದ ಅಭಿವೃದ್ಧಿ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪಂಗಡಗಳಾದ ಮಲೆಕುಡಿಯಾ ಮತ್ತು ಡೊಂಗ್ರಿಗರೇಶಿಯಾ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ಒತ್ತು ನೀಡಬೇಕು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಮಲೆಕುಡಿಯಾ ಮತ್ತು ಡೊಂಗ್ರಿಗರೇಶಿಯಾ ಸಮುದಾಯದವರನ್ನು ಗ್ರಾಮ ಪಂಚಾಯ್ತಿ ಅಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಸಮನ್ವಯದೊಂದಿಗೆ ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡಬೇಕು. ಆ ಸಮುದಾಯದ ಜನರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಹಾಗೂ ಅವರ ಸಮಸ್ಯೆ ಮತ್ತು ಕುಂದುಕೊರತೆಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಸೂಚಿಸಿದರು.
ನಿವೇಶನ ರಹಿತ ಈ ಸಮುದಾಯದ ಜನರಿಗೆ ನಿವೇಶನಗಳನ್ನು ಒದಗಿಸಬೇಕು. ಅದಕ್ಕಾಗಿ ಸೂಕ್ತ ಸ್ಥಳವನ್ನು ಗುರುತಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಲಲಿತಾಬಾಯಿ, ಜಿಪಂ ಮುಖ್ಯ ಯೋಜನಾಧಿಕಾರಿ ಶಂಕರಪ್ಪ, ನಗರಸಭೆ ಆಯುಕ್ತ ನಾಗಭೂಷಣ್, ಸಮಾಜ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

