ಮೈಸೂರಿನಲ್ಲಿ ವಿಶ್ವ ಆದಿವಾಸಿ ದಿನಾಚರಣೆ
ಮೂಡಿಗೆರೆ: ರಾಜ್ಯದ ಆದಿವಾಸಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಪರಿಹರಿಸಿಕೊಳ್ಳುವ ದೃಷ್ಟಿಯಿಂದ ಆ.8, 9 ರಂದು ಮೈಸೂರಿನ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ 20ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ಆದಿವಾಸಿ ಕಲಾಮೇಳ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ನ ಜಿಲ್ಲಾಧ್ಯಕ್ಷೆ ಕೆ.ರಾಜಮ್ಮ ಹೇಳಿದ್ದಾರೆ.
ಇಲ್ಲಿನ ಲ್ಯಾಂಪ್ಸ್ ಸೊಸೈಟಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಡಕಟ್ಟುಗಳ ಜನಜಾಗೃತಿಗೆ ಆದಿವಾಸಿಗಳ ಕಲಾಮೇಳ, ವಿಚಾರ ಸಂಕಿರಣ, ಸಮ್ಮೇಳನ, ಆದಿವಾಸಿ ಹಬ್ಬಗಳನ್ನು ಸಂಘಟಿಸಬೇಕಾಗಿದೆ. 1995 ರಿಂದ ವಿಶ್ವ ಸಂಸ್ಥೆಯ ವಿಶ್ವ ಆದಿವಾಸಿ ದಿನಾಚರಣೆ ಆಚರಿಸುತ್ತಿದೆ. ಇದರ ಭಾಗವಾಗಿ ಮೈಸೂರಿನಲ್ಲಿ ನಡೆಯಲಿರುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ. ಕೇಂದ್ರ ಮತ್ತು ರಾಜ್ಯದ ಬುಡಕಟ್ಟು ಸಂಸದರು, ಶಾಸಕರು, ಚಿಂತಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಲ್ಯಾಂಪ್ ಸೊಸೈಟಿ ಮಾಜಿ ಅಧ್ಯಕ್ಷ ಬೆಟ್ಟದಮನೆ ಮುತ್ತಪ್ಪ ಮಾತನಾಡಿ, ಗಿರಿಜನರ ಬಹು ಬೇಡಿಕೆಯ ದಾಲ್ಚಿನ್ನಿ ಎಲೆಗಳ ಸಂಗ್ರಹಕ್ಕೆ ಅವಕಾಶ ಕಲ್ಪಿಸಬೇಕು. ಸರ್ಕಾರ ಮನ್ನಾ ಮಾಡಿರುವ ಸಾಲ ಯೋಜನೆಯ ಮೊತ್ತವನ್ನು ಲ್ಯಾಂಪ್ಸ್ ಸೊಸೈಟಿಗೆ ತಕ್ಷಣ ಬಿಡುಗಡೆ ಮಾಡಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಪರಿಷತ್ನ ಸಂಘಟನಾ ಕಾರ್ಯದರ್ಶಿ ಕಳಸ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವಿ. ಚಂದ್ರಶೇಖರ್, ಮುಖಂಡರಾದ ಸುಂದರ್ಕುಮಾರ್, ಕುಸುಮಾವತಿ, ಮಹೇಶ್ ಶೆಟ್ಟಿಕೊಪ್ಪ, ಸುಲೋಚನಾ, ಕಳಸ ಕೃಷ್ಣಪ್ಪ, ನೀಲಯ್ಯ, ವಾಸು ಹೊಸನಗರ, ಸುಂದರ ಕವನಹಳ್ಳ, ವಿಜೇಂದ್ರ, ರಮೇಶ್, ಅಣ್ಣಪ್ಪ, ರಮೇಶ್, ರವಿ ಹೊಯ್ಸಳಲು ಮತ್ತಿತರರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

