ಅತ್ಯಾಚಾರ ಘಟನೆ ಖಂಡಿಸಿ ಸಂಘಟನೆಗಳ ಪ್ರತಿಭಟನೆ
ಮೂಡಿಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಘಟನೆ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಡಾ. ರಾಜ್ ಕನ್ನಡ ಸಂಘ ಕಳಸ ಮತ್ತು ಕರವೇ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚಳವಾಗುತ್ತಿದೆ. ನಿರಂತರವಾಗಿ ನಡೆಯುತ್ತಿರುವ ಇಂತಹ ಪ್ರಕರಣಗಳಿಂದ ಹಗಲಿನಲ್ಲಿಯೂ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲಾಗದ ಪರಿಸ್ಥಿತಿ ಎದುರಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಾನೂನು ಇನ್ನಷ್ಟು ಬಿಗಿಯಾಗಬೇಕಾಗಿದ್ದು, ಅತ್ಯಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವಂತೆ ಕಾನೂನು ಅವಶ್ಯಕವಾಗಿದೆ ಎಂದರು.
ಶಾಲಾಕಾಲೇಜುಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಸೂಕ್ತ ರಕ್ಷಣೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕಳಸ ನಾಡ ಕಚೇರಿ ಉಪತಹಸೀಲ್ದಾರರರ ಮುಖಾಂತರ ತಹಸೀಲ್ದಾರರಿಗೆ ಕೊಟ್ಟ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ರಾಘವೇಂದ್ರ, ಕನ್ನಡ ಸಂಘದ ಅಧ್ಯಕ್ಷ ರಾಜು, ದಿನೇಶ, ನಾರಾಯಣ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

