5 ಕಡೆ ಶೌಚಾಲಯ ನಿರ್ಮಾಣಕ್ಕೆ ನಗರಾಧ್ಯಕ್ಷ ಪುಷ್ಪರಾಜ್ ಚಾಲನೆ
ಚಿಕ್ಕಮಗಳೂರು: ನಗರದ ಶಾಲಾ ಕಾಲೇಜು, ಅಂಗನವಾಡಿ, ಸರ್ಕಾರಿ ಕಚೇರಿಗಳು ಸೇರಿದಂತೆ ಐದು ಕಡೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್ ಚಾಲನೆ ನೀಡಿದರು.
ಜಿಲ್ಲಾ ಗ್ರಂಥಾಲಯ ಆವರಣದಲ್ಲಿ ಸೋಮವಾರ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಶಕಗಳಿಂದ ಲೈಬ್ರರಿಯಲ್ಲಿ ಶೌಚಾಲಯದ ಕೊರತೆ ಇದೆ ಎಂಬ ಬಗ್ಗೆ ಸಾಜನಿಕರು ಗಮನಕ್ಕೆ ತಂದಿದ್ದರು. ಇದಲ್ಲದೆ ಕೆಲವು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯ ನಿರ್ಮಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಸಂಬಂಧ ಸರ್ಕಾರಿ ಜ್ಯೂನಿಯರ್ ಕಾಲೇಜು, ಬಸವನಹಳ್ಳಿ ಮಹಿಳಾ ಕಾಲೇಜು, ಬೀಕನಹಳ್ಳಿ ಬಿಡಿಆರ್ ಕಾಲೇಜು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಸರ್ಕಾರಿ ಕಾಲೇಜುಗಳಲ್ಲಿ ಶೌಚಾಲಯದ ಕೊರತೆಯಿದ್ದು ರು. 9.47 ಲಕ್ಷ ವೆಚ್ಚದಲ್ಲಿ ಈ ಸ್ಥಳಗಳಲ್ಲಿ ಸುಲಭ್ ಶೌಚಾಲಯ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಅನುದಾನದಲ್ಲಿ ಹಣ ಉಳಿದರೆ ಅವಶ್ಯವಿರುವ ಕಡೆ ಶೌಚಾಲಯ ನಿರ್ಮಿಸಲು ಆಲೋಚಿಸಲಾಗಿದೆ ಎಂದು ಹೇಳಿದರು. ನಗರಸಭೆ ಉಪಾಧ್ಯಕ್ಷ ಅಪ್ಸರ್ ಅಹಮದ್, ಸದಸ್ಯರಾದ ದೇವರಾಜ ಶೆಟ್ಟಿ, ನರಸಿಂಹ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

