ಚಿಕ್ಕಮಗಳೂರು

ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಮೀಗಾ ಆಗ್ರಹ

Published On :

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೂತುವಳ್ಳಿಯಲ್ಲಿ ರೈತರಿಗೆ ಸೇರಿದ ಜಮೀನು ಒತ್ತುವರಿ ಖುಲ್ಲಾ ನೆಪದಲ್ಲಿ ವಲಯ ಅರಣ್ಯಾಧಿಕಾರಿಗಳು ಮರಗಳನ್ನು ಕಡಿದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಕಿಸಾನ್ ಸಭಾ ಉಪಾಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದ್ದಾರೆ.
ಶೃಂಗೇರಿಯ ವಲಯ ಅರಣ್ಯಾಧಿಕಾರಿ ಮೋಹನ್ ಬಿದ್ರೆ ಅವರು ಗ್ರಾಮದ ಸತೀಶ್ ಮತ್ತು ಮಹೇಶ್ ಎಂಬುವರಿಗೆ ಸೇರಿದ ಜಮೀನಿನ ಒತ್ತುವರಿ ಖುಲ್ಲಾಪಡಿಸುವ ಸಂದರ್ಭದಲ್ಲಿ 400 ಕಾಫಿ ಗಿಡಗಳನ್ನು ಕಡಿಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.
ಈ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ ಅವರು, ಸರಕಾರ ಕೂಡಲೇ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ತಿಳಿಸಿದರು.
ಮುಂದೆ ಯಾವುದೇ ಒತ್ತುವರಿ ಪ್ರಕರಣ ತೆರವುಗೊಳಿಸುವಾಗ ಅಲ್ಲಿರುವ ಮರಗಳನ್ನು ಕಡಿಯಬಾರದು ಎಂದು ತಿಳಿಸಿದರು.
ಸಮಾಜ ಪರಿವರ್ತನಾ ವೇದಿಕೆಯ ಹಿರೇಮಠ್ ಒತ್ತುವರಿ ಖುಲ್ಲಾ ಪಡಿಸಬೇಕೆಂಬ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣ ಆ. 1ರಂದು ವಿಚಾರಣೆಗೆ ಬರುತ್ತಿದ್ದು, ಈ ಸಂದರ್ಭದಲ್ಲಿ ತೀರ್ಪು ಹೊರಬೀಳುವ ಸಾಧ್ಯತೆಯಿದೆ.
ಇದು ಬೆಳೆಗಾರರ ಪರ ಅಥವಾ ವಿರೋಧವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದ ಅವರು, ಬಾಲಸುಬ್ರಹ್ಮಣ್ಯಂ ಸಮಿತಿ ವರದಿ ರಾಜ್ಯದಲ್ಲಿ ಜಾರಿಗೆ ಬಂದಿಲ್ಲ ಎಂದು ಸದನದಲ್ಲಿ ಅರಣ್ಯ ಸಚಿವರು ಉತ್ತರ ನೀಡಿದ್ದಾರೆ.
ಆದ್ದರಿಂದ ಒತ್ತುವರಿ ಖುಲ್ಲಾ ಸಂಬಂಧಿಸಿದಂತೆ ರಾಜ್ಯ ಸರಕಾರ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಬೇಕೆಂದು ಆಗ್ರಹಿಸಿದರು.
ಶೃಂಗೇರಿ ತಾಲೂಕಿನ ರೈತ ಸಂಘದ ಮುಖಂಡ ಗೋಪಾಲ್ ನಾಯ್ಕ ಮಾತನಾಡಿ, ಹಳದಿ ಎಲೆ ರೋಗದ ಕುರಿತಂತೆ ಸರಕಾರಗಳು ನಾನಾ ರೀತಿಯ ಭರವಸೆ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ರೈತರಿಗೆ ಅನುಕೂಲವಾಗಬೇಕು ಎಂದರೆ ಮೊದಲು ಅವರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್ ಅಮೀನ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.