ಚಿಕ್ಕಮಗಳೂರು

ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ

Published On :

ತರೀಕೆರೆ: ಪತ್ರಕರ್ತರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇನೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಸಮೀಪದ ಲಿಂಗದಹಳ್ಳಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಏರ್ಪಾಡಾಗಿದ್ದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಲಿಂಗದಹಳ್ಳಿಗೆ ಕುಡಿಯುವ ನೀರಿನ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ಶಾಶ್ವತ ಪರಿಹಾರ ಒದಗಿಸುತ್ತೇನೆ ಎಂದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ದಿನೇಶ್ ಪಟುವರ್ಧನ್ ಮಾತನಾಡಿ, ಪತ್ರಕರ್ತರು ಮನೆ, ನಿವೇಶನ, ಬಸ್ ಪಾಸು ಇಲ್ಲದೆ ಆರ್ಥಿಕ ತೊಂದರೆ, ಆರೋಗ್ಯ ತೊಂದರೆಗಳಿಂದ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.
ಸಂಘದ ಅಧ್ಯಕ್ಷ ಜಿ. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಯಕುಮಾರ್, ತಾಪಂ ಅಧ್ಯಕ್ಷೆ ಲೀಲಾವತಿ ಮಲ್ಲಿಕಾರ್ಜುನ್, ಉಪಾಧ್ಯಕ್ಷೆ ಲತಾ ತಮ್ಮಯ್ಯ, ಗ್ರಾಪಂ ಅಧ್ಯಕ್ಷೆ ಚಂದ್ರೀಬಾಯಿ, ದೇವರಾಜ್, ಸದಸ್ಯರಾದ ಜೈರಾಮ್, ಲೋಕೇಶ್, ಜಿಪಂ ಸದಸ್ಯ ಕೆ.ಪಿ.ಕುಮಾರ್, ಜಿಲ್ಲಾ ಕಾ.ನಿ.ಪ. ಸಂಘದ ಉಪಾಧ್ಯಕ್ಷ ಟಿ.ಎಸ್.ಬಸವರಾಜ್, ವೀರೇಶ್ ಮೂರ್ತಿ, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಘಟನಾ ಸಂಚಾಲಕರಾದ ಶಶಿಕಲಾ ಮತ್ತು ಗಣ್ಯರನ್ನು ಸನ್ಮಾನಿಸಲಾಯಿತು. ಪರಮೇಶ್ ಸ್ವಾಗತಿಸಿದರು. ವೆಂಕಟೇಶ್ ಪ್ರಾರ್ಥಿಸಿದರು. ಶ್ಯಾಮ್‌ಪ್ರಸಾದ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.