ಚಿಕ್ಕಮಗಳೂರು

'ರವಿ ರಾಜಿನಾಮೆಗೆ ಒತ್ತಾಯ ಹಾಸ್ಯಾಸ್ಪದ'

Published On :

ಚಿಕ್ಕಮಗಳೂರು: ಹಿರೇಮಗಳೂರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಅವರು ಶಾಸಕ ಸಿ.ಟಿ. ರವಿಯವರ ರಾಜಿನಾಮೆಗೆ ಒತ್ತಾಯಿಸಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ ಆರೋಪಿಸಿದ್ದಾರೆ.
ಶಾಸಕ ಸಿ.ಟಿ. ರವಿ ಸರ್ವೇ ನಂಬರ್ 519 ರ 6.3 ಎಕರೆ ಭೂಮಿಯನ್ನು ಅಕ್ರಮ ಡಿನೋಟಿಫಿಕೇಶನ್, ಅಧಿಕಾರ ದಬ್ಬಾಳಿಕೆ, ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ಆಪಾದನೆ ಮಾಡಿರುವುದು ರಾಜಕೀಯ ಪ್ರೇರಿತವಾದ ಆರೋಪ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಅದು ಆರೋಪವಷ್ಟೆ:   ಜಮೀನನ್ನು ಡಿನೋಟಿಫಿಕೇಶನ್ ಮಾಡುವ ಅಧಿಕಾರ ಶಾಸಕರಿಗೆ ಇಲ್ಲ ಎಂಬುದು ಕಾಂಗ್ರೆಸ್ ನಾಯಕರಿಗೆ ಅರಿವಿಲ್ಲದೇ ಆರೋಪ ಮಾಡುತ್ತಿರುವುದು ದುರದುಷ್ಟಕರ. ಜಮೀನು ಡಿನೋಟಿಫಿಕೇಶನ್ ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ ಮಾತ್ರ ಇರುವುದು. ಕಾಂಗ್ರೆಸ್ ನಾಯಕರು ಕಾನೂನಿನಲ್ಲಿ ಯಾವ ಯಾವ ಅಧಿಕಾರ ಯಾರು ಯಾರಿಗೆ ಇರುತ್ತದೆ ಎಂಬುದನ್ನು ಮೊದಲು ಅರಿತುಕೊಳ್ಳಲಿ.
ಡಿನೋಟಿಫಿಕೇಶನ್ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಸಣ್ಣಮಲ್ಲಪ್ಪ ಎಂಬುವವರು ದೂರು ನೀಡಿದ್ದಾರೆ. ಲೋಕಾಯುಕ್ತ ಇಲಾಖೆ ನ್ಯಾಯಾಲಯಕ್ಕೆ ಎಫ್‌ಐರ್ ಸಲ್ಲಿಸಿದೆ. ಅದು ಆರೋಪವಷ್ಟೆ. ಅದನ್ನು ಲೋಕಾಯುಕ್ತರು ಸಂಪೂರ್ಣ ತನಿಖೆ ಮಾಡಿದ ಮೇಲೆ ಸತ್ಯಾಂಶ ಹೊರಬೀಳಲಿದೆ. ಶಾಸಕರು ಲೋಕಾಯುಕ್ತ ತನಿಖೆಗೆ ಸಂಪೂರ್ಮ ಸಹಕಾರ ನೀಡಲಿದ್ದಾರೆ ಎಂದರು.
ನಗರಸಭಾಧ್ಯಕ್ಷ ಪುಷ್ಪರಾಜ್, ಬಿಜೆಪಿ ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭಾ ಸದಸ್ಯ ದೇವರಾಜ್ ಶೆಟ್ಟಿ, ರವೀಂದ್ರಪ್ರಭು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.