ಗುಣಾತ್ಮಕ ಶಿಕ್ಷಣಕ್ಕೆ ಸಹಕಾರ ಅಗತ್ಯ
ತರೀಕೆರೆ: ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಹಾಗೂ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದ್ದು, ಇದಕ್ಕೆ ಪೋಷಕರ ಸಹಕಾರ ಅಗತ್ಯ ಎಂದು ಜಿಪಂ ಸದಸ್ಯ ಹೇಮಾವತಿ ಕೃಷ್ಣಪ್ಪ ತಿಳಿಸಿದ್ದಾರೆ.
ಸಮೀಪದ ನಂದಿಹೊಸಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಾಡಾಗಿದ್ದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನ ಮತ್ತು ಪಠ್ಯ ಪುಸ್ತಕ ವಿತರಣೆ ಸಮಾರಂಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು.
ಗ್ರಾಮದ ಮಕ್ಕಳು ಬೇರೆ ಊರಿನ ಶಾಲೆಗೆ ಹೋಗದಂತೆ ತಮ್ಮ ಶಾಲೆಯಲ್ಲಿಯೇ ಕಲಿಯಲು ಮೂಲ ಸೌಕರ್ಯ ಒದಗಿಸುವ ಜತೆಗೆ ಗುಣಾತ್ಮಕ ಶಿಕ್ಷಣ ನೀಡಲು ಎಸ್‌ಡಿಎಂಸಿ ಹಾಗೂ ಪೋಷಕರು ಸಹಕರಿಸಬೇಕೆಂದು ತಿಳಿಸಿದ ಅವರು, ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ತಾಪಂ ಸದಸ್ಯ ಬಿ.ಆರ್. ರವಿ ಮಾತನಾಡಿ, ಸರ್ಕಾರವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಿಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕೆಂದರು. ತಾಪಂನಿಂದ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ತಿಳಿಸಿದರು.
ಮುಖ್ಯ ಶಿಕ್ಷಕ ಶೇಖರಪ್ಪ ಅವರು ಶಾಲೆ ಪ್ರಗತಿ ಹಾಗೂ ಸಮಸ್ಯೆ ಬಗ್ಗೆ ಮಾತನಾಡಿ, ಶಾಲಾ ಕಾಂಪೌಂಡ್ ಮತ್ತು ಇತರ ಸೌಲಭ್ಯಗಳಿಗೆ ಮನವಿ ಮಾಡಿದರು. ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಓಂಕಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ತಾಪಂ ಮಾಜಿ ಸದಸ್ಯ ಕೃಷ್ಣಪ್ಪ, ಎಸ್‌ಡಿಎಂಸಿ ಸದಸ್ಯರು, ನಾಗರಾಜ್, ಶಿಕ್ಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ದೇವರಾಜ್ ಅವರು ಸ್ವಾಗತಿಸಿದರು. ವಾಣಿ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ಶೇಖರಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

