ಚಿಕ್ಕಮಗಳೂರು

ಕೈಗಾರಿಕಾ ಇಲಾಖೆ ಫಲಾನುಭಗಳಿಗೆ ಪರಿಕರ ವಿತರಣೆ

Published On :

ತರೀಕೆರೆ: ಜಿಪಂ ಮತ್ತು ತಾಪಂ ವತಿಯಿಂದ ಕೈಗಾರಿಕಾ ಇಲಾಖೆ ಮೂಲಕ ಫಲಾನುಭಗಳಿಗೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು. ಶುಕ್ರವಾರ ತಾಪಂ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಶಕುಂತಲ ನಾಗರಾಜ್ ಫಲಾನುಭವಿಗಳಿಗೆ ವಿವಿಧ ಪರಿಕರಗಳನ್ನು ವಿತರಿಸಿ ಮಾತನಾಡಿದರು. ತಾಪಂ ಸದಸ್ಯ ರಾಜ್ಕುಮಾರ್ ಮಾತನಾಡಿ, ಪರಿಕರಗಳ ಉಪಯೋಗವನ್ನು ಪಡೆಯಬೇಕು ಎಂದು ತಿಳಿಸಿದರು.
ತಾಪಂ ಇಒ ದೇವರಾಜ್ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ನೈಪುಣ್ಯತೆ, ವೃತ್ತಿ ಕೌಶಲ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಪಡೆದು, ಜೀವನಮಟ್ಟ ಸುಧಾರಿಸಿಕೊಳ್ಳಬೇಕು, ಪರಿಕರಗಳಿಂದ ಇತರರಿಗೂ ತರಬೇತಿ ನೀಡಿ ಎಂದರು. ಕೈಗಾರಿಕಾ ಇಲಾಖೆ ದೊರೆರಾಜ್ ಮಾತನಾಡಿ, ಜಿಪಂ ವತಿಯಿಂದ 28 ಜನರಿಗೆ ಮತ್ತು ತಾಪಂ ವತಿಯಿಂದ 19 ಜನರಿಗೆ ವಿವಿಧ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ತಾಪಂ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.
ಜಿಪಂ ಚುನಾವಣೆ ಮುಂದೂಡಿಕೆ
ಶಿವಮೊಗ್ಗ: ಜೂ.4ರಂದು ನಡೆಯಬೇಕಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀದರ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಗಳು ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನಿಗಧಿಯಾಗಿದ್ದ ತುಮಕೂರು ಮತ್ತು ಶಿವಮೊಗ್ಗ ಜಿಪಂ ಚುನಾವಣೆಗಳನ್ನು ಮುಂದೂಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.