ಗೋಪಿನಾಥ ಮುಂಡೆಗೆ ಸಂತಾಪ
ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗೋಪಿನಾಥ್ ಮುಂಡೆ ಅವರು ನಿಧನರಾಗಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು ಸಂತಾಪ ಸೂಚಿಸಿದರು.
ಮುಂಡೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ, ಮುಂಡೆ ಅವರ ನಿಧನದಿಂದಾಗಿ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್. ಪ್ರೇಂಕುಮಾರ್ ಮಾತನಾಡಿ, ಅವರು ವಿದ್ಯಾರ್ಥಿ ಜೀವನದಲ್ಲೇ ಸಂಘದ ಸ್ವಯಂ ಸೇವಕರಾಗಿ ದೇಶ ಸೇವೆಯಲ್ಲಿ ತೊಡಗಿ ನಂತರ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಪರಿಷತ್ನ ನಾಯಕರಾಗಿ ತಮ್ಮ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದ್ದರು. ದುರ್ದೈವವಶಾತ್ ಹಠಾತ್ ಅವರ ನಿಧನದಿಂದ ದೇಶಕ್ಕೆ ಮತ್ತು ಅವರ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.
ನಗರ ಬಿಜೆಪಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಸಂಘಟನಾ ಕಾರ್ಯದರ್ಶಿ ಸೀತಾರಾಮ್ ಭರಣ್ಯ, ನಗರಸಭಾ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜ್ ಶೆಟ್ಟಿ, ರವೀಂದ್ರನಾಥ ಪ್ರಭು, ಮಧುಕುಮಾರ್ರಾಜ್ ಅರಸ್, ನಗರಸಭಾ ಸದಸ್ಯರಾದ ಭುಜೇಂದ್ರ ರಾಜ್ ಅರಸ್, ಜಗದೀಶ್, ಬಿ.ಎಚ್. ಹರೀಶ್ ಇದ್ದರು.
ಮೂಡಿಗೆರೆ
ರಸ್ತೆ ಅಪಘಾತದಲ್ಲಿ ನಿಧನರಾದ ಕೇಂದ್ರ ಸಚಿವ ಗೋಪಿನಾಥ ಮುಂಡೆಯವರ ನಿಧನಕ್ಕೆ ಮೂಡಿಗೆರೆ ಬಿಜೆಪಿ ಘಟಕದಿಂದ ಸಂತಾಪ ಸೂಚಿಸಲಾಯಿತು.
ಪಟ್ಟಣದ ಪಕ್ಷದ ಕಚೇರಿಯಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಪಕ್ಷದ ಮುಖಂಡ ಎಂ.ಅರ್. ಜಗದೀಶ ಮಾತನಾಡಿ, ಗೋಪಿನಾಥ ಮುಂಡೆಯವರು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, 5 ಬಾರಿ ಶಾಸಕರಾಗಿ, ಒಂದು ಬಾರಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಈ ಬಾರಿಯ ಲೋಕಸಬಾ ಚುನಾವಣೆಯಲ್ಲಿ ಜಯಗಳಿಸಿ ಮೋದಿಯವರ ಕೇಂದ್ರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಅವರ ನಿಧನದಿಂದ ಪಕ್ಷ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.
ಪಕ್ಷದ ಜಿಲ್ಲಾ ಉಪಾದ್ಯಕ್ಷ ಡಿ.ಎಸ್. ಸುರೇಂದ್ರ, ತಾಲೂಕು ಪ್ರಧಾನ ಕಾರ್ಯದರ್ಶಿ ಸಂದ್ರೇಶ ಕೊಣಗೆರೆ, ತಾಲೂಕು ಉಪಾಧ್ಯಕ್ಷ ಮನೋಜ್ ಹಳೆಕೋಟೆ, ನಗರ ಘಟಕದ ಕಾರ್ಯದರ್ಶಿಗಳಾದ ಮಂಜುನಾಥ್, ಪ್ರವೀಣ್, ಮುಖಂಡರಾದ ಲಕ್ಷ್ಮಣ್ಶೆಟ್ಟಿ, ಅಶ್ವತ್ ಹಂತೂರು, ರಘುನಾಥ್, ಕೆ.ಎನ್. ಕಣಚೂರು ವಿನೋದ್, ಕೆ.ಎನ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

