ಚಿಕ್ಕಮಗಳೂರು

ಉದ್ಯೋಗಕ್ಕೆ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಎಂ.ಎಸ್. ಎಸಿಸಿಪಿಎಲ್ ಸಂಸ್ಥೆ ವತಿಯಿಂದ ಕಂಪ್ಯೂಟರ್ ತರಬೇತಿಗೆ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಅರ್ಹ ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಅಥವಾ ಐಟಿಐ ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕಾಲ್ ಸೆಂಟರ್ ಟ್ರೈನಿಂಗ್, ಎಂ.ಎಸ್. ಆಫೀಸ್ ಆ್ಯಂಡ್ ಬೇಸಿಕ್ ಟ್ಯಾಲಿ, ರಿಟೇಲಿಂಗ್ ಆ್ಯಂಡ್ ಹಾಸ್ಪಿಟಾಲಿಟಿ, ಅಕೌಂಟಿಂಗ್ ಬೇಸಿಕ್ಸ್ ವಿತ್ ಅಡ್ವಾನ್ಸಡ್ ಟ್ಯಾಲಿ(ಇಆರ್‌ಪಿ), ಕಂಪ್ಯೂಟರ್ ಗ್ರಾಫಿಕ್ಸ್ ಆ್ಯಂಡ್ ಆನಿಮೇಷನ್(ಫೋಟೊ ಶಾಪ್, ಕೋರಲ್ ಡ್ರಾವ್ ಮತ್ತು ಫ್ಲಾಷ್) ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗುವುದು.  ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ.
ಬೆಳೆ ವಿಮೆ ಯೋಜನೆ
ಚಿಕ್ಕಮಗಳೂರು: ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿಗೆ ರಾಷ್ಟ್ರೀಯ ಬೆಳೆ ವಿಮಾ ಕಾರ್ಯಕ್ರಮದಡಿ ಹವಮಾನ ಆಧರಿತ ಬೆಳೆ ವಿಮಾ ಯೋಜನೆಯನ್ನು ವಿಮಾ ಕಂಪನಿಯಾದ ಇಫ್ಕೋ ಟೋಕಿಯೋ ಜನರಲ್ ಇನ್ಶೂರೆನ್ಸ್ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಅಂಬಳೆ, ವಸ್ತಾರೆ, ಲಕ್ಯಾ ಮತ್ತು ಚಿಕ್ಕಮಗಳೂರು(ಕಸಬಾ) ಹೋಬಳಿಗಳು ಸದರಿ ವಿಮಾ ಕಂಪನಿಯ ಕ್ಷೇತ್ರ ವ್ಯಾಪ್ತಿಗೆ ಒಳಪಡುತ್ತಿದ್ದು, ತೋಟಗಾರಿಕೆ ಬೆಳೆಗಳಾದ ಆಲೂಗಡ್ಡೆ (ನೀರಾವರಿ), ಆಲೂಗಡ್ಡೆ(ಮಳೆಯಾಶ್ರಿತ) ಮತ್ತು ಮೆಣಸಿನಕಾಯಿ(ಮಳೆಯಾಶ್ರಿತ) ಬೆಳೆಗಳಿಗೆ ವಿಮೆ ಸೀಮಿತವಾಗಿರುತ್ತದೆ. ಬೆಳೆಸಾಲ ಪಡೆದ ಎಲ್ಲಾ ರೈತರು ಈ ಯೋಜನೆಗೆ ಒಳಪಡುವುದು ಕಡ್ಡಾಯವಾಗಿದ್ದು, ರೈತರು ಜೂನ್ 30 ರೊಳಗೆ ವಿಮಾ ಕಂತನ್ನು ಪಾವತಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಾವು ಬೆಳೆ ಸಾಲ ಪಡೆದಿರುವ ಬ್ಯಾಂಕುಗಳಲ್ಲಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ದಂಟರಮಕ್ಕಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ.
ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ಹಿರೇಮಗಳೂರು ವಿ.ವಿ ಕೇಂದ್ರದಲ್ಲಿ ಜೂ. 4 ಹಾಗೂ ಜೂ. 6 ರಂದು ಕಳಸಾಪುರ ವಿ.ವಿ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಇದರಿಂದ ಹಿರೇಮಗಳೂರು ಹಾಗೂ ಕಳಾಸಪುರ ವಿ.ವಿ ಕೇಂದ್ರದ ನಗರ ಮತ್ತು ಗ್ರಾಮೀಣ ಫೀಡರ್‌ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.