ಗುಣಮಟ್ಟದ ಕಾಮಗಾರಿಗೆ ನಗರಸಭಾಧ್ಯಕ್ಷ ಸೂಚನೆ
ಚಿಕ್ಕಮಗಳೂರು: ನಗರದಲ್ಲಿ ರಸ್ತೆ, ಬಾಕ್ಸ್ ಚರಂಡಿಗಳ ಕಾಮಗಾರಿಗಳು ನಡೆಯುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದಲ್ಲಿ ಕಾಮಗಾರಿ ಮಾಡಬೇಕೆಂದು ನಗರಸಭೆ ಅಧ್ಯಕ್ಷ ಪುಷ್ಪರಾಜ್ ಸೂಚನೆ ನೀಡಿದ್ದಾರೆ.
ನಗರದ 9ನೇ ವಾರ್ಡ್‌ನಲ್ಲಿರುವ ರಾಮೇಶ್ವರ ನಗರದಲ್ಲಿ 13ನೇ ಹಣಕಾಸು ಯೋಜನೆಯಡಿ ನಡೆಯುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಮಾತನಾಡಿದರು.
ಮಳೆಗಾಲ ಇರುವುದರಿಂದ ಗುತ್ತಿಗೆದಾರರು ಶೀಘ್ರದಲ್ಲಿ ಕಾಮಗಾರಿಯನ್ನು ಗುಣಮಟ್ಟದಲ್ಲಿ ನಿರ್ಮಿಸಬೇಕು. ಕಳಪೆ ಕಾಮಗಾರಿಯ ದೂರುಗಳು ಸಾರ್ವಜನಿಕರಿಂದ ಬಂದಲ್ಲಿ ತಕ್ಷಣ ಪರಿಶೀಲಿಸಿ ಎಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಗರದಾದ್ಯಂತ ಎಲ್ಲಾ ವಾರ್ಡ್‌ಗಳಲ್ಲೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು.
ನಗರಸಭೆ ಸದಸ್ಯ ದೇವರಾಜ್ ಶೆಟ್ಟಿ ಮಾತನಾಡಿ, ವಾರ್ಡಿನ ಎಲ್ಲಾ ರಸ್ತೆಗಳಲ್ಲೂ ಬಾಕ್ಸ್ ಚರಂಡಿ, ಡಾಂಬರೀಕರಣ ಕೆಲಸ ಮಾಡಿಸಲಾಗುತ್ತಿದೆ. ಈಗಾಗಲೇ ಯುಜಿಡಿ ಕಾಮಗಾರಿ ಸಂಪೂರ್ಣಗೊಂಡಿದೆ. ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು ಎಂದರು.
ನಗರಸಭೆ ಸದಸ್ಯ ರವೀಂದ್ರ ಪ್ರಭು, ಇತರೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

