ಚಿಕ್ಕಮಗಳೂರು

ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟದ ಪದಗ್ರಹಣ

Published On :

ಕಡೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಡೂರು ತಾಲೂಕಿನ ಅಣೇಗೆರೆಯಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಸಮಾರಂಭ ನಡೆಯಿತು.
ಜಿ.ಎಂ. ರಾಜಪ್ಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪುದೇ ಇರುವ ಈ ದಿನಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತನ್ನೆಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿರುವುದು ಸಂತೋಷದ ಸಂಗತಿ ಎಂದರು.
ಕಾರ್ಯಕ್ಕೆ ಶ್ಲಾಘನೆ: ಖಾಸಗಿಯವರಿಂದ ಸಾಲ ಪಡೆದು, ಅತಿ ಹೆಚ್ಚು ಬಡ್ಡಿ ಪಾವತಿಸಬೇಕಾಗಿದ್ದ ರೈತರಿಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಾ ಬಡವರಿಗೆ, ರೈತರಿಗೆ, ಸಣ್ಣ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಟ್ಟಿದೆ.  ಅಲ್ಲದೆ ಗುಡಿ ಕೈಗಾರಿಕೆಗನ್ನು ಪ್ರೋತ್ಸಾಹಿಸಿ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ ಎಂದು ಹೇಳಿ ಯೋಜನೆಯ ಕಾರ್ಯಗಳನ್ನು ಶ್ಲಾಘಿಸಿದರು.
ಶೆಟ್ಟಿಹಳ್ಳಿ ರಾಮಪ್ಪ ಮಾತನಾಡಿ, ಹೆಣ್ಣು ಮಕ್ಕಳು ಕೇವಲ ಮನೆ ಕೆಲಸಗಳಿಗೆ ಮಾತ್ರ ಸೀಮಿತರಾಗದೇ  ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಅವರ ಪಾತ್ರ ಗಣನೀಯ. ಎಂದರು. ಯೋಜನೆಯ ಮೇಲ್ವಿಚಾರಕ ಹರೀಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಅಣೇಗೆರೆ ಒಕ್ಕಟೂದಲ್ಲಿ 580  ಪಾಲುಗಾರರನ್ನೊಳಗೊಂಡ 14 ಪ್ರಗತಿಬಂಧು ಸಂಘ, 36 ಸ್ವಸಹಾಯ ಸಂಘಗಳು ಕಾರ್ಯನಿರ್ವಹಿಸುತ್ತದೆ ಎಂದರು.
ಗ್ರಾಪಂ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಹೇಶ್ ಒಡೆಯರ್,  ಎಪಿಎಂಸಿ ನಿರ್ದೇಶಕ ಎಚ್.ಎಂ. ರೇವಣ್ಣಯ್ಯ, ಕೆ. ಮಹೇಶ್ವರಪ್ಪ, ಡಾ. ಚಂದ್ರಕಾಂತ್, ಕೆಂಪರಾಜು, ಆನಂದ್, ಮಹೇಶ್, ಮೊದಲಾದವರು  ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸಾಮೂಹಿಕ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.