ಮುಖ್ಯವಾಹಿನಿಗೆ ಬರಲು ಶಿಕ್ಷಣ ಅಗತ್ಯ
ಚಿಕ್ಕಮಗಳೂರು: ಹಿಂದುಳಿದ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಮಕ್ಕಳು ಕಡ್ಡಾಯವಾಗಿ ಶಿಕ್ಷಣವಂತರಾಗಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಧರ್ ಮೋಹನ್ ಹೇಳಿದ್ದಾರೆ.
ಸವಿತಾ ಸಮಾಜ ಸೇವಾ ಟ್ರಸ್ಟ್ ನಗರದ ಶ್ರೀ ರಾಮಮಂದಿರದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯೆ ಯಾರೂ ಕದಿಯಲಾಗದ ಸ್ವತ್ತು. ಅದು ವಿದ್ಯಾವಂತನ ಬದುಕಿನುದ್ದಕ್ಕೂ ಜೊತೆಯಾಗಿದ್ದು, ಆತನಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನವನ್ನು ತಂದುಕೊಡುತ್ತದೆ ಎಂದ ಅವರು, ಹಿಂದುಳಿದ ವರ್ಗದ ಮಕ್ಕಳು ಇದನ್ನು ಅರಿಯಬೇಕು. ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಪ್ರೋತ್ಸಾಹ ಧನ: ಟ್ರಸ್ಟ್‌ನ ಗೌರವಾಧ್ಯಕ್ಷ ಬಾಲಕೃಷ್ಣ ಮಾತನಾಡಿ, ಸಮಾಜದ ಬಡ ವಿದ್ಯಾರ್ಥಿಗಳನ್ನು ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ 13 ವರ್ಷಗಳಿಂದ ಟ್ರಸ್ಟ್ ವತಿಯಿಂದ ನಿರಂತರವಾಗಿ ಉಚಿತ ನೋಟ್ ಪುಸ್ತಕಗಳನ್ನು ನೀಡಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವುದರ ಜೊತೆಗೆ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಪ್ರೋತ್ಸಾಹಧನವನ್ನು ನೀಡಲಾಯಿತು.
ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಸಿ. ವೆಂಕಟೇಶ್, ಟ್ರಸ್ಟ್ ಕಾರ್ಯದರ್ಶಿ ಹರೀಶ್, ನಿರ್ದೇಶಕ ಜೆ. ಸತ್ಯನಾರಾಯಣ, ನಗರಸಭೆ ಮಾಜಿ ಸದಸ್ಯ ಲಕ್ಷ್ಮೀಕಾಂತ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

