ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಕ.ಪ್ರ.ವಾರ್ತೆ ಶೃಂಗೇರಿ ಜೂ.6
ನಮ್ಮ ಸುತ್ತಮುತ್ತಲಿನ ಗಿಡ, ಮರ, ಕಾಡು, ನೆಲ, ಜಲ ಉಳಿಸಿ ಸಂರಕ್ಷಿಸಬೇಕು. ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಜೆಸಿಐ ಅಧ್ಯಕ್ಷ ರಮೇಶ್ ಹೇಳಿದರು.
ಜೆಸಿರೇಟ್ ಹಾಗೂ ಜೆಸಿಐ, ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹತ್ತರ ಪರಿಣಾಮ: ಗಿಡ, ಮರ ಬೆಳೆಸುವುದರಿಂದ ಶುದ್ಧಗಾಳಿ, ಉತ್ತಮ ಆರೋಗ್ಯ ಸಿಗುತ್ತದೆ. ಕಾಡು ಉಳಿದರೆ ನಾಡು. ಮಳೆ, ಬೆಳೆ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಸ್ವಾಭಾವಿಕ ಕಾಡು ನಾಶವಾಗಿ ಕೃತಕ ಕಾಡು ಬೆಳೆಸಲ್ಪಡುತ್ತಿದೆ. ಇದು ಪರಿಸರದ ಮೇಲೆ ಮಹತ್ತರ ಪರಿಣಾಮ ಬೀರುತ್ತಿದೆ. ಸಕಾಲದಲ್ಲಿ ಮಳೆಯಾಗದಿರುವುದು, ಅಂತರ್ಜಲ ಕೊರತೆ, ಇತ್ಯಾದಿ ಪರಿಣಾಮ ಬೀರುತ್ತಿದೆ. ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತಿದೆ.
ನಮ್ಮ ಸುತ್ತಮುತ್ತಲ ಪ್ರದೇಶಗಳಲ್ಲಿ ಗಿಡ ಮರ ಬೆಳೆಸಬೇಕು. ಜಮೀನು, ತೋಟಗಳಲ್ಲಿ ಮರ ಬೆಳೆಸಬೇಕು.ಪ್ರಕೃತಿ ನಮ್ಮೆಲ್ಲರ ಜನ್ಮ ಸಿದ್ದ ಹಕ್ಕು. ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದವರು ಹೇಳಿದರು.
ಪ್ಲಾಸ್ಟಿಕ್ ಬಳಕೆ ತಡೆಗಟ್ಟಬೇಕು. ಇದು ಪರಿಸರವನ್ನು ಹಾಳು ಮಾಡುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಇಡೀ ವಾತಾವರಣವೇ ಹಾಳಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಸಂರಕ್ಷಣೆಗೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಪರಿಸರ ದಿನಾಚಾರಣೆ, ವನಮಹೋತ್ಸವಗಳು ಕೇವಲ ದಿನಾಚಾರಣೆಗಳಿಗೆ ಸೀಮಿತವಾಗಿರದೇ ಆಚರಣೆಗೆ ಬರಬೇಕು. ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದವರು ಹೇಳಿದರು.
ಶಾಲಾ ಮುಖ್ಯೋಪಾಧ್ಯಾಯ ವಿಜಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಅನಿತ್ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಪರಿಸರ ಕುರಿತ ಉಪನ್ಯಾಸ, ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

