ಶಾಲೆ ಚಾವಣಿ ಕುಸಿದು ವರ್ಷವಾದ್ರೂ ದುರಸ್ತಿಯಿಲ್ಲ!
ಚಿಕ್ಕಮಗಳೂರು: ಶಾಲೆ ಚಾವಣಿ ಕುಸಿದು ವರ್ಷ ಕಳೆದರೂ ಶಿಕ್ಷಣ ಇಲಾಖೆ ಶಾಲೆಯನ್ನು ದುರಸ್ತಿಪಡಿಸುವ ನಿಟ್ಟಿನಲ್ಲಿ ಈವರೆಗೆ ಕ್ರಮ ವಹಿಸಿಲ್ಲ. ಇದರ ಪರಿಣಾಮವಾಗಿ ಈ ಶಾಲೆಯ ಮಕ್ಕಳು ಬೇರೆ ಶಾಲೆಗಳತ್ತ ಮುಖ ಮಾಡಿದ್ದಾರೆ.
- ಇದು, ಜಿಲ್ಲೆಯ ಯಾವುದೋ ಕುಗ್ರಾಮದಲ್ಲಿರುವ ಶಾಲೆಯ ಸ್ಥಿತಿ ಅಲ್ಲ. ನಗರಸಭೆ ವ್ಯಾಪ್ತಿಯಲ್ಲಿರುವ ಚಿಕ್ಕ ಕುರುಬರಹಳ್ಳಿಯಲ್ಲಿರುವ ಶಾಲೆಯ ಸ್ಥಿತಿಗತಿ.
ಈ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಐದನೇ ತರಗತಿಗಳಿದ್ದು, ಹಾಲಿ ಮಕ್ಕಳ ಸಂಖ್ಯೆ ಕೇವಲ 12 ಮಾತ್ರ. ಇಲ್ಲಿ ಮಕ್ಕಳ ಸಂಖ್ಯೆ ಕುಸಿಯಲು ಕಾರಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ಎಂದು ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇಲ್ಲಿ 3 ಕೊಠಡಿಗಳಿದ್ದು, ಕಳೆದ ವರ್ಷ ಸುರಿದ ಭಾರಿ ಮಳೆಗೆ ಶಾಲೆಯ ಚಾವಣಿ ಕುಸಿದಿತ್ತು. ಶಾಲೆಯ ಸ್ಥಿತಿ ನೋಡಿ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಿದರು. ಇಲ್ಲಿ ಬಡವರ ಮಕ್ಕಳೇ ಇದ್ದು, ಈ ಶಾಲ್ನೆ ದುರಸ್ತಿ ಕೋರಿ ಶಿಕ್ಷಣ ಇಲಾಖೆಗೆ ಪತ್ರ ಮುಖೇನ ಆಗ್ರಹಿಸಿದ್ದರೂ ಪ್ರಯೋಜನವಾಗಿಲ್ಲ. ಮಕ್ಕಳ ಭಯದಿಂದ ಕಾಲ ಕಳೆಯುವಂತಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೋಭಾ ತಿಳಿಸಿದ್ದಾರೆ.
ಸರ್ಕಾರ ಬಡ ಮಕ್ಕಳ ಪ್ರಾಣದ ಜತೆಗೆ ಚೆಲ್ಲಾಟವಾಡುತ್ತಿದೆ. ಕೂಡಲೇ ಶಾಲೆ ದುರಸ್ತಿಗೊಳಿಸಬೇಕು. ಅಲ್ಲಿಯವರೆಗೆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಜನದನಿ ಸಂಘಟನೆ ಸಂಚಾಲಕ ಬಿ. ಅಮ್ಜದ್ ಹಾಗೂ ಗುರುಶಾಂತಪ್ಪ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

