ಪಟ್ಟಣಕ್ಕೆ ವಲಸೆ ಆತಂಕಕಾರಿ ಬೆಳವಣಿಗೆ
ಚಿಕ್ಕಮಗಳೂರು: ದೇಶ ಅಗಾಧ ಮಾನವ ಸಂಪನ್ಮೂಲ ಹೊಂದಿದ್ದು, ಇಂದಿಗೂ ಬಹುಪಾಲು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಿರುದ್ಯೋಗಿ ಯುವಕ ಯುವತಿಯರು ಉದ್ಯೋಗ ಅರಸುತ್ತ ಪಟ್ಟಣಗಳಿಗೆ ವಲಸೆ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಬ್ ಸೆಟ್ ಸಂಸ್ಥೆ ನಿರ್ದೇಶಕ ಆರ್.ಕೆ. ಬಾಲಚಂದ್ರ ಹೇಳಿದರು.
ನಗರದ ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ವಿಕಲಚೇತನರ ಸಬಲೀಕರಣ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ ಮತ್ತು ಎನೇಬಲ್ ಇಂಡಿಯಾ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರಿಗೆ ಉದ್ಯಮಶೀಲತಾ ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರಿಗೆ ಈ ಕ್ಷಣಕ್ಕೆ ಬೇಕಾದದ್ದು ಅವಕಾಶವೇ ಹೊರತು ಅನುಕಂಪವಲ್ಲ. ಎಲ್ಲರಿಗೂ ಸರ್ಕಾರಿ ಉದ್ಯೋಗ ಕಲ್ಪಿಸಲು ಸಾಧ್ಯವಿಲ್ಲ. ಆದರೆ, ಸ್ವ ಉದ್ಯೋಗ ಕೈಗೊಳ್ಳಲು ಸಾಧ್ಯವಿದೆ. ತರಬೇತಿಯಲ್ಲಿ ನೀಡುವ ಜ್ಞಾನದ ಬೆಳಕಿನಲ್ಲಿ ಸ್ವಂತ ಉದ್ಯೋಗ ಆರಿಸಿಕೊಂಡು ಆರ್ಥಿಕವಾಗಿ ಸದೃಢರಾಗುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬಹುದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಜೆ. ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಮಾತನಾಡಿದರು. ಎನೇಬಲ್ ಇಂಡಿಯಾ ಸಂಸ್ಥೆಯ ಅಭಿವೃದ್ಧಿ ಸಲಹೆಗಾರ ಬಿ. ಶಿವಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

