ಚಿಕ್ಕಮಗಳೂರು

ಕುಡಿವ ನೀರು, ರಸ್ತೆ ಕಾಮಗಾರಿ ಅಕ್ರಮ ತನಿಖೆಯಾಗಲಿ:ನೀಲಕಂಠಪ್ಪ

Published On :

ಚಿಕ್ಕಮಗಳೂರು:  ತರೀಕೆರೆ ತಾಲೂಕಿನಲ್ಲಿ ಕಳೆದ ಸಾಲಿನಲ್ಲಿ ಕೈಗೊಂಡಿದ್ದ ಕುಡಿಯುವ ನೀರು ಹಾಗೂ ರಸ್ತೆ ಕಾಮಗಾರಿಯಲ್ಲಿ ಅಕ್ರಮ ನಡೆದಿದ್ದು, ತನಿಖೆ ನಡೆಸಬೇಕೆಂದು ತರೀಕೆರೆ ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದಾರೆ.
2013- 14ನೇ ಸಾಲಿನಲ್ಲಿ ರಾಷ್ಟ್ರೀಯ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ 30-54 ಯೋಜನೆಯಡಿ ಸುಮಾರು 14.42 ಕೋಟಿ ಕಾಮಗಾರಿ ನಡೆದಿದ್ದು, ಕೆಲವೆಡೆ ನಡೆದಿರುವ ಕಾಮಗಾರಿ ಕಳಪೆಯಾಗಿದೆ. ಮತ್ತೆ ಕೆಲವೆಡೆ ಕಾಮಗಾರಿ ನಡೆಸದೆ ಬಿಲ್ ಪಡೆಯಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಯೋಜನೆಗಳಡಿ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಗೂ ಕೊಳವೆಬಾವಿ ಕೊರೆಸಲಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ, ಇದೊಂದು ಹಗಲು ದರೋಡೆ ಎಂದು ಹೇಳಿದರು.
ಈ ಎಲ್ಲಾ ಅವ್ಯವಸ್ಥೆಗೆ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್, ಜಿಪಂ ಸದಸ್ಯರುಗಳಾದ ಕೆ.ಆರ್. ಆನಂದ, ಶಂಬೈನೂರು ಆನಂದ, ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಕಾರಣಕರ್ತರಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ನೈಜ ಸತ್ಯತೆಯನ್ನು ಬಯಲಿಗೆ ಎಳೆಯಬೇಕು.ಕೋರನಹಳ್ಳಿ, ಬೆಟ್ಟದಹಳ್ಳಿ, ಹುಣಸಘಟ್ಟ, ಅಜ್ಜಂಪುರ ಸುತ್ತಮುತ್ತ ಕುಡಿಯುವ ನೀರಿನ ಕಾಮಗಾರಿಯ ಕೆಲಸಗಳು ನಡೆದಿಲ್ಲ. ಈ ಭ್ರಷ್ಟಚಾರದ ವಿರುದ್ಧ ಹೋರಾಟ ನಡೆಸಲು ಜೂ.18ರಂದು ತರೀಕೆರೆಯ ಕನಕ ಭವನದಲ್ಲಿ ಸಭೆಯನ್ನು ಕರೆಯಲಾಗಿದ್ದು, ಮುಂದಿನ ರೂಪುರೇಷವನ್ನು ಸಿದ್ಧಪಡಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.