ಚಿಕ್ಕಮಗಳೂರು

ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ: ಪದ್ಮನಾಭ ಪ್ರಸನ್ನ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಜೂ.13
ಇನಾಂ ಭೂಮಿ ಸಂತ್ರಸ್ತರು ಸಂಕಷ್ಟಲ್ಲಿ ಸಿಲುಕಿದ್ದು, ಅವರ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ನಿರ್ಧರಿಸುರುವುದಾಗಿ ಕೆಜೆಪಿ ಸಂಸ್ಥಾಪಕ, ರಾಷ್ಟ್ರಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಹಲವಾರು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕಣ್ಣುಮುಚ್ಚಿ ಕುಳಿತಿವೆ ಎಂದು ದೂರಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದ್ದಾಗ ಬಿ.ಎಲ್. ಶಂಕರ್ ಮತ್ತು ಅಧಿಕಾರಿಗಳ ನಡುವಿನ ವೈಮನಸ್ಸಿನಿಂದ ತತ್ಕೊಳದಲ್ಲಿ ತಲೆತಲಾಂತರದಿಂದ ವಾಸಿಸುತ್ತಿದ್ದ ಜನರನ್ನು ಬೀದಿಗೆ ತಳ್ಳಿತು. ಈಗ ಅದೇ ಕಾಂಗ್ರೆಸ್ ಸರ್ಕಾರ ಆಡಳಿತಲ್ಲಿ ಇರುವಾಗಲೇ ಇನಾಂ ಭೂಮಿಯಲ್ಲಿ ತಲೆತಲಾಂತರದಿಂದ ವಾಸಿಸುತ್ತಿರುವ ಬಡ ಕುಟುಂಬವನ್ನು ಬೀದಿಗೆ ತಳ್ಳಲು ನೋಡುತ್ತಿದೆ. ಜೂ.13ರಂದು ಉಚ್ಚನ್ಯಾಯಾಲಯದಲ್ಲಿ ಸಾರ್ವಜನಿಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ತಿರಸ್ಕೃತಗೊಂಡಿದೆ. ಇನಾಂ ಭೂಮಿಯ ಸಂತ್ರಸ್ತರ ಪರವಾಗಿ ಸೋಮವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಹೇಮಾವತಿ ನದಿಯಲ್ಲಿ ಪ್ರಭಾವಿ ವ್ಯಕ್ತಿಗಳು ಮರಳು ದಂಧೆಯಲ್ಲಿ ಶಾಮೀಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಮೂಲಕ ಒತ್ತಾಯಿಸಲಾಗುವುದು ಎಂದರು.
ಪಟ್ಟಣದ ಮಹಾತ್ಮಗಾಂಧಿ ಸ್ಮಾರಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಗಮನಕ್ಕೆ ತರಲಾಗುವುದು. ಸಮಸ್ಯೆ ಬಗೆಹರಿಸದ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಕಾರ್ಯದರ್ಶಿ ಸಲೀಂಖಾನ್, ಕರವೇ ಗೌರವಾಧ್ಯಕ್ಷ ಹೊರಟ್ಟಿ ರಘು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.