ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಆಗ್ರಹ
ನರಸಿಂಹರಾಜಪುರ: ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಜನರಿಗೆ ಮಾರಕವಾಗಲಿರುವ ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿಯನ್ನು ತರಾತುರಿಯಲ್ಲಿ ಜಾರಿಗೆ ತರಬಾರದು ಎಂದು ಸಂಸದರಾದ ಶೋಭಾ ಕರಂದ್ಲಾಜೆ ಅವರು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಒತ್ತಾಯಿಸಿದ್ದಾರೆ ಎಂದು ಶಾಸಕ ಡಿ.ಎನ್. ಜೀವರಾಜ್ ತಿಳಿಸಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಶೋಭಾ ಕರಂದ್ಲಾಜೆ ಅವರು ಎರಡು ದಿನಗಳ ಹಿಂದೆ ಪರಿಸರ ಖಾತೆ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಜನರಿಗೆ ಮಾರಕವಾಗಲಿರುವ ಯೋಜನೆಗಳನ್ನು ಜಾರಿಗೆ ತರುವ ಮುನ್ನ ಇಲ್ಲಿನ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಜೀವರಾಜ್ ತಿಳಿಸಿದರು.
ಶೃಂಗೇರಿಯಲ್ಲಿ ಹೈವೇ ಕಚೇರಿ: ಪ್ರಸ್ತುತ ಕುಂದಾಪುರದಲ್ಲಿ ರಾಷ್ಚೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಇದ್ದು, ಇದರ ಉಪ ಕಚೇರಿಯನ್ನು ಶೃಂಗೇರಿಯಲ್ಲಿ ತೆರೆಯಲು ಸಿದ್ಧತೆ ಮಾಡಕೊಳ್ಳಲಾಗುತ್ತಿದೆ ಎಂದು ಡಿ.ಎನ್. ಜೀವರಾಜ್ ತಿಳಿಸಿದರು. ಇದರಿಂದ ಮಲೆನಾಡು ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಿಗೆ ಚಾಲನೆ ದೊರೆಯಬಹುದು ಎಂದು ಅವರು ಆಶಾಭಾವ ವ್ಯಕ್ತಪಡಿಸಿದರು.
ಕೆಲವು ವರ್ಷಗಳ ಹಿಂದೆ ಶಿವಮೊಗ್ಗ- ಕೊಪ್ಪ ರಾಷ್ಚೀಯ ಹೆದ್ದಾರಿ ರಸ್ತೆ ಆಗಿತ್ತು. ಆ ರಾಷ್ಚೀಯ ಹೆದ್ದಾರಿಯು ಶಿವಮೊಗ್ಗ- ನರಸಿಂಹರಾಜಪುರ-ಕೊಪ್ಪ ಮಾರ್ಗ ಬಿಟ್ಟು ಶಿವಮೊಗ್ಗ, ತೀರ್ಥಹಳ್ಳಿ ಮಾರ್ಗದಲ್ಲಿ ಕೊಪ್ಪಕ್ಕೆ ಸೇರಿಸಲಾಗಿತ್ತು. ಆ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರು ತಮ್ಮ ಇಚ್ಛಾಶಕ್ತಿ ಪ್ರದರ್ಶನ ಮಾಡಲಿಲ್ಲ. ತೀರ್ಥಹಳ್ಳಿಯ ಶಾಸಕರು ಹೆಚ್ಚು ಮುತುವರ್ಜಿ ವಹಿಸಿ ತಮ್ಮ ಕ್ಷೇತ್ರಕ್ಕೆ ರಾಷ್ಚೀಯ ಹೆದ್ದಾರಿ ಮಾಡಿಸಿಕೊಂಡಿದ್ದರು. ಈ ರಾಷ್ಚೀಯ ಹೆದ್ದಾರಿಯು ಸುತ್ತು ಬಳಸಿ ಬಂದಿದ್ದರಿಂದ 20 ಕಿಮೀನಷ್ಟು ಜಾಸ್ತಿ ದೂರವಾಗಿತ್ತು. ಮುಂದಿನ ದಿನಗಳಲ್ಲಿ ಶಿವಮೊಗ್ಗ-ನರಸಿಂಹರಾಜಪುರ- ಕೊಪ್ಪ ಮಾರ್ಗಕ್ಕೆ ರಾಷ್ಚೀಯ ಹೆದ್ದಾರಿ ರಸ್ತೆ ಮಾಡಿಸಲು ಪ್ರಯತ್ನ ಮಾಡಿಸುವುದಾಗಿ ತಿಳಿಸಿದರು.
--
ಬೈಕ್- ಟ್ರ್ಯಾಕ್ಟರ್ ಡಿಕ್ಕಿ: ಸವಾರನಿಗೆ ಗಾಯ
ಶೃಂಗೇರಿ: ಪಟ್ಟಣದ ಮುಖ್ಯದ್ವಾರದ ಬಳಿ ಬೈಕ್- ಟ್ರ್ಯಾಕ್ಟರ್ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ರಾಘು ಎಂಬಾತ ಗಾಯಗೊಂಡ ವ್ಯಕ್ತಿ. ಗಾಯಾಳುವನ್ನು ಚಿಕಿತ್ಸೆಗಾಗಿ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಕಿಗ್ಗಾ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀಧರ್ ಭಟ್(60) ಎಂದು ಗುರುತಿಸಲಾಗಿದೆ. ಸಾಲಬಾಧೆ ಸಾವಿಗೆ ಕಾರಣ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

