ಚಿಕ್ಕಮಗಳೂರು

ಹೊಸ್ಕೆರೆ ನಾದತರಂಗ ಕಾರ್ಯಕ್ರಮ 21ಕ್ಕೆ

Published On :

ಶೃಂಗೇರಿ: ಪಟ್ಟಣದ ಡಾ.ಗೌರೀಶಂಕರ ಸಭಾಂಗಣದಲ್ಲಿ ಜೂನ್ 21 ರಂದು ಸಂಜೆ 5-30ಕ್ಕೆ ಹೊಸ್ಕೆರೆ ನಾದತರಂಗ, ಮನರಂಜನಾ ಕಾರ್ಯಕ್ರಮ ಹಾಗೂ ನವಗೀತ ಮಾಲ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ನಡೆಯಲಿದೆ. ಡಾ.ಸಿ.ವಿ.ಗಿರಿಧರಶಾಸ್ತ್ರಿ ಹೊಸ್ಕೆರೆ ವೆಂಕಟೇಶ್, ಎಂ.ನಾಗರಾವ್ ಕಲ್ಕಟ್ಟೆ ಸಂಗೀತದ ಸಿಡಿ ಬಿಡುಗಡೆ ಮಾಡಲಿದ್ದಾರೆ. ಪಪಂ ಅಧ್ಯಕ್ಷೆ ಶೋಭಾ ಅನಂತಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಶ್ರೀಕಂಠ ಭಟ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಸೂಡಾ ಹಗರಣ ಸಿಬಿಐಗೆ ವಹಿಸಲು ಆಗ್ರಹ
ಶಿವಮೊಗ್ಗ:  ಸೂಡಾ ನಿವೇಶನ ಹಗರಣವನ್ನು ಸಿಬಿಐಗೆ ವಹಿಸಲು ಕ್ರಮ ಕೈಗೊಳ್ಳುವಂತೆ ಅಣ್ಣಾ ಹಜಾರೆ ಹೋರಾಟ ಸಮಿತಿ ಹಾಗೂ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಿದೆ. ಮಂಗಳವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಸೂಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆಸಿರುವ ತಪ್ಪಿತಸ್ಥರ ವಿರುದ್ಧ ಮೊದಲು ಎಫ್‌ಐಆರ್ ದಾಖಲಿಸಬೇಕೆಂದೂ ಸಹ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.