ಚಿಕ್ಕಮಗಳೂರು

ಚಿಕ್ಕಮಗಳೂರು: ಹಣಕ್ಕಾಗಿ ಕೂದಲು ವ್ಯಾಪಾರಿ ಅಪಹರಣ

Published On :

ಚಿಕ್ಕಮಗಳೂರು:  ಹಣಕ್ಕಾಗಿ ವ್ಯಕ್ತಿಯೋರ್ವರನ್ನು ಅಪಹರಿಸಿರುವ ಘಟನೆ ತರೀಕೆರೆ ತಾಲೂಕಿನ ಬೇಲೇನಹಳ್ಳಿ ಬಳಿ ಭಾನುವಾರ ನಡೆದಿರುವ ತಡವಾಗಿ ಬೆಳಕಿಗೆ ಬಂದಿದೆ.
ಬೇಲೇನಹಳ್ಳಿಯ ನಿವಾಸಿ ಮಹೇಂದ್ರ ಎಂಬವರು ಜೂ.15ರಂದು ಬೆಳಗ್ಗೆ ಕೂದಲು ವ್ಯಾಪಾರಕ್ಕಾಗಿ ತಮ್ಮ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಗುಂಪೊಂದು ಅವರನ್ನು ಅಪಹರಿಸಿತ್ತು. ನಂತರ ಮಹೇಂದ್ರ ಅವರ ಪತ್ನಿಗೆ ದೂರವಾಣಿಯಲ್ಲಿ ಕರೆ ಮಾಡಿ ತಾವು ಪೊಲೀಸರು ಎಂದು ಹೇಳಿ, ಅವರನ್ನು ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದೇವೆಂದು ತಿಳಿಸಿದ್ದಾರೆ.
ಬಳಿಕ ಸಂಜೆ ಮೊಬೈಲ್‌ಗೆ ಕರೆ ಮಾಡಿ, ಮಹೇಂದ್ರ ಅವರನ್ನು ತಾವು ಅಪಹರಿಸಿದ್ದು, ಅವರನ್ನು ಬಿಡುಗಡೆಗೊಳಿಸಲು 6 ಲಕ್ಷ ಕೊಡಬೇಕು. ಇಲ್ಲದಿದ್ದರೆ ಮಹೇಂದ್ರ ತಮಗೆ ಸಿಗುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.