ಚಿಕ್ಕಮಗಳೂರು

ಭಾರಿ ಗಾಳಿ: ಮರ ಬಿದ್ದು ವಿದ್ಯಾರ್ಥಿಗೆ ತೀವ್ರ ಗಾಯ

Published On :

ಹರಪನಹಳ್ಳಿ:  ಗಾಳಿ ರಭಸಕ್ಕೆ ಮರ ಮೈ ಮೇಲೆ ಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಪುಣಬಗಟ್ಟಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಚನ್ನಾಪುರ ಮನೋಜ್(14) ಆಸ್ಪತ್ರೆಗೆ ಗಾಯಗೊಂಡವ. ಕಮ್ಮತ್ತಹಳ್ಳಿ ಗ್ರಾಮದ ಗುರುದೇವ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಾನೆ. ಮಧ್ಯಾಹ್ನದ ಚೆನ್ನಾಪುರಕ್ಕೆ ಬಂದು ಊಟ ಮಾಡಿ, ಸೈಕಲ್ ತೆಗೆದುಕೊಂಡು ಪುಣಬಗಟ್ಟಿ ಮೂಲಕ ಶಾಲೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಇದರಿಂದ 2 ಕೈ, 2 ಕಾಲುಗಳು ಮುರಿದಿವೆ.  ಹೊಟ್ಟೆಗೆ ಬಲವಾಗಿ ಪೆಟ್ಟು ಬಿದ್ದಿದೆ. ವಿದ್ಯಾರ್ಥಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಗ್ರಾಮದಲ್ಲಿ 10 ವಿದ್ಯುತ್ ಕಂಬಗಳು ಧರೆಗುರಳಿವೆ.



ಬೈಕ್ ಕಳವು
ಶೃಂಗೇರಿ: ತಾಲೂಕಿನ ನೆಮ್ಮಾರು ಎಂಬಲ್ಲಿ ಅಬ್ದುಲ್ ರೆಹಮಾನ್ ಎಂಬುವರ ಮನೆ ಮುಂದೆ ನಿಲ್ಲಿಸಲಾಗಿದ್ದ ಎರಡು ಬೈಕ್‌ಗಳನ್ನು 2 ದಿನಗಳ ಹಿಂದೆ ರಾತ್ರಿ ಕಳವು ಮಾಡಲಾಗಿತ್ತು. ಈ ಕುರಿತು ಬೈಕ್ ಮಾಲಿಕರು ಠಾಣೆಯಲ್ಲಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಶೃಂಗೇರಿ ಪಟ್ಟಣದ ಕಲ್ಲುಮೆಟ್ಟಿಲು ಎಂಬಲ್ಲಿ ಸಂಪತ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಕಳವು ಪ್ರಕರಣ ದಾಖಲಾಗಿದೆ. ಈಚಿನ ದಿನಗಳಲ್ಲಿ ಬೈಕ್ ಕಳವು ಪ್ರಕರಣ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಹುಟ್ಟಿಸಿದೆ. ಬೈಕ್ ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು:  ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ತಾಲೂಕು ಪಂಚಾಯಿತಿ ಆವರಣ ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.