ಚಿಕ್ಕಮಗಳೂರು

ಜಗಜೀವನರಾಂ ಭವನ ಕಾಮಗಾರಿ ಆರಂಭಿಸಿ: ಬಿಜೆಪಿ ಒತ್ತಾಯ

Published On :

ಚಿಕ್ಕಮಗಳೂರು: ನಗರದಲ್ಲಿ ನಿರ್ಮಾಣಗೊಳಿಸಲು ಉದ್ದೇಶಿಸಿರುವ ಬಾಬು ಜಗಜೀವನರಾಂ ಭವನದ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ನೇತೃತ್ವದಲ್ಲಿ ಹಳೇ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ಮನವಿ ಸಲ್ಲಿಸಿದರು. ಭವನ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಅವರನ್ನು ಆಗ್ರಹಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕ ಸಿ.ಟಿ. ರವಿ ಅವರ ಪ್ರಯತ್ನದ ಫಲವಾಗಿ ಚಿಕ್ಕಮಗಳೂರಿನಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ ಆಗಿನ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅವರು 5 ಕೋಟಿ ಮಂಜೂರು ಮಾಡಿದ್ದರು. ಚಿಕ್ಕಮಗಳೂರಿನ ನಲ್ಲೂರಿನಲ್ಲಿ ಬಾಬು ಜಗಜೀವನರಾಂ ಭವನಕ್ಕೆ ಜಾಗ ಗುರುತಿಸಿ, ಭೂಮಿ ಪೂಜೆ ನೆರವೇರಿಸಲಾಗಿತ್ತು ಎಂದರು. ಆದರೆ, ಸಮಾಜ ಕಲ್ಯಾಣ ಇಲಾಖೆಯಿಂದ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಣ ಸಂದಾಯ ಮಾಡದೇ ಇರುವುದರಿಂದ ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ದಲಿತ ಸಮುದಾಯದ ಕಾರ್ಯಕ್ರಮಗಳನ್ನು ನಡೆಸಲು ಬಹುದಿನಗಳ ಕನಸಾಗಿದ್ದ ಬಾಬು ಜಗಜೀವನರಾಂ ಭವನದ ಕಾಮಗಾರಿ ನೆನೆಗುದಿಗೆ ಬಿದ್ದಿರುವುದು ಅತ್ಯಂತ ಖಂಡನೀಯ. ಆದ್ದರಿಂದ ತಕ್ಷಣವೇ ಸಂಬಂಧಪಟ್ಟ ಇಲಾಖೆಗೆ ಕಾಮಗಾರಿ ಆರಂಭಿಸಲು ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.