ಚಿಕ್ಕಮಗಳೂರು

ಜಾನುವಾರು ಅಕ್ರಮ ಸಾಗಣೆ: 3 ಬಂಧನ

Published On :

ಕೊಪ್ಪ:  ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 8 ರಾಸುಗಳನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಬಂಧಿಸಿ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇಲ್ಲಿನ ಅಡ್ಡಗದ್ದೆಯಿಂದ ಭದ್ರಾವತಿಯ ಕಸಾಯಿಖಾನೆಗೆ ರಾಸುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಗುರುವಾರ ಪಟ್ಟಣದ ದ್ಯಾವೇಗೌಡ ವೃತ್ತದಲ್ಲಿ ಮಹೇಂದ್ರ ಪಿಕಪ್ ವಾಹನ ತಡೆದು ಪರಿಶೀಲಿಸಿದರು.
ಈ ಸಂದರ್ಭ ಚಾಲಕ ರಮೇಶ್, ದಸ್ತಗಿರಿ ಹಾಗೂ ರಾಸುಗಳನ್ನು ಮಾರಾಟ ಮಾಡಿದ ಮಹೇಶ್ ಎಂಬವರನ್ನು ಬಂಧಿಸಲಾಯಿತು. ಪೊಲೀಸ್ ಠಾಣೆ ಆವರಣದಲ್ಲಿ ಕಟ್ಟಲಾಗಿದ್ದ ರಾಸುಗಳನ್ನು ಶುಕ್ರವಾರ ಬಜರಂಗದಳ ಕಾರ್ಯಕರ್ತರು ಶಿವಮೊಗ್ಗ ಗೋಶಾಲೆಗೆ ಸಾಗಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.