ನೆಪ ಬಿಡಿ, ಕೆಲಸ ಮಾಡಿ
ಶೃಂಗೇರಿ: ಅಧಿಕಾರಿಗಳೇ ಸಬೂಬು ಹೇಳಬೇಡಿ. ಕಾಟಾಚಾರದ ವರದಿ ನೀಡಿ ನಿಮ್ಮ ಕೆಲಸದ ಭಾರ ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಬೇಡ. ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ಮಾಡಿ ಎಂದು ಶಾಸಕ ಡಿ.ಎನ್.ಜೀವರಾಜ್ ಅಧಿಕಾರಿಗಳಿಗೆ ಸಲಹೆ ನೀಡಿದರು. ಅವರು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಇಲಾಖೆಯವರ ಅಹವಾಲಿಗೆ ಉತ್ತರಿಸಿದ ಅವರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿ, ಆರೋಗ್ಯ ಸಹಾಯಕಿಯರ, ವೈದ್ಯಾಧಿಕಾರಿಗಳ ಕೊರತೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ. ನೆಮ್ಮಾರು, ಬೇಗಾರು ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲ. ಈ ಬಗ್ಗೆಯೂ ಸಚಿವರ ಗಮನಕ್ಕೆ ತರುತ್ತೇನೆ. ಶೀಘ್ರದಲ್ಲಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತೇನೆ ಎಂದು ಹೇಳಿದರು.
ಸಬ್ ರಿಜಿಸ್ಟ್ರಾರ್ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಕೆಲವು ಲೋಪದೋಷಗಳ ಬಗ್ಗೆ ತರಾಟೆಗೆ ತೆಗೆದು ಕೊಂಡರು.
ಕೊಠಡಿಗಳ ಸಮಸ್ಯೆ ಬಗ್ಗೆ ತಹಸೀಲ್ದಾರ್ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಸರ್ಕಾರಿ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಅಧಿಕಾರ, ಹುದ್ದೆ ಶಾಶ್ವತವಲ್ಲ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ನೂತನ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ಬಿ.ಶಿವಶಂಕರ್, ಜಿಪಂ ಮಾಜಿ ಉಪಾಧ್ಯಕ್ಷ ಮಾವಿನಕಾಡು ರಂಗನಾಥ್, ಪಪಂ ಅಧ್ಯಕ್ಷೆ ಶ್ರೀಮತಿ ಶೋಭಾ ಅನಂತಯ್ಯ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಬಿ.ಜಗದೇವ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

