ವರದಿ ಮರುಪರಿಶೀಲಿಸಿ: ಶೋಭಾ
ಚಿಕ್ಕಮಗಳೂರು: ಪಶ್ಚಿಮಘಟ್ಟ ಸಂರಕ್ಷಣೆಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ಹಾಗೂ ಮಾಧವ ಗಾಡ್ಗೀಲ್ ನೀಡಿರುವ ವರದಿಗಳ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಸಂಬಂಧ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವಡೆಕರ್ಗೆ ಪತ್ರ ಮುಖೇನ ತಿಳಿಸಲಾಗಿದೆ. ಇದರ ಜತೆಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಅವರೊಂದಿಗೆ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಆಗ್ರಹಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಈ ಎರಡು ವರದಿಗಳಲ್ಲಿ ಹೇಳಲಾಗಿದೆ. ಆದರೆ, ಎಲ್ಲೂ ಕೂಡ ಮಾನವ ಸಂಪನ್ಮೂಲದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇನ್ನು ಈ ಎರಡು ವರದಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಇದರಿಂದಾಗಿ ಪಶ್ಚಿಮಘಟ್ಟದಲ್ಲಿರುವ ರೈತರಲ್ಲಿ ಹಾಗೂ ನಿವಾಸಿಗರಲ್ಲಿ ಆತಂಕ ಮೂಡಿದೆ. ಇದನ್ನು ಸಚಿವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
'ಇನಾಂ ಭೂಮಿ; ಕಾಯಂಗೆ ಅವಕಾಶ'
ಚಿಕ್ಕಮಗಳೂರು: ಕಳಸದ ಇನಾಂ ಭೂಮಿಯ ಜನರನ್ನು ಅರಣ್ಯ ಕಾಯ್ದೆ- 2006ರ ಪ್ರಕಾರ ಕಾಯಂಗೊಳಿಸಲು ಅವಕಾಶ ಇದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇನಾಂ ಭೂಮಿ ತೆರವಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳೊಂದಿಗೆ ಶನಿವಾರ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅರಣ್ಯ ಕಾಯ್ದೆ- 2006ರ ಪ್ರಕಾರ 10 ಎಕರೆ ಒಳಗಿನ ಜನರನ್ನು ಒಕ್ಕಲೆಬ್ಬಿಸುವಂತಿಲ್ಲ. ದೇಶದ ವಿವಿಧೆಡೆ ಈ ಕಾಯ್ದೆಯನ್ವಯ ಅರಣ್ಯ ನಿವಾಸಿಗರನ್ನು ಕಾಯಂಗೊಳಿಸಲಾಗಿದೆ. ಅದೇ ರೀತಿ ಇನಾಂ ಭೂಮಿಯಲ್ಲಿ ವಾಸವಾಗಿರುವವರನ್ನು ಕಾಯಂಗೊಳಿಸಲು ಅವಕಾಶ ಇದೆ ಎಂದರು. ಜೂ. 27ಕ್ಕೆ ಇನಾಂ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಬರಲಿದೆ. ನ್ಯಾಯಾಲಯದಿಂದ ಸೂಚನೆ ಬರುವವರೆಗೆ ಇಲ್ಲಿನ ಜನರನ್ನು ತೆರವುಗೊಳಿಸಬಾರದೆಂದು ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

