ಒಂದಲ್ಲಾ ಒಂದು ದಿನ ಜನ ನಮ್ಮೊಂದಿಗೆ ಕೈಜೋಡಿಸ್ತಾರೆ: ಶಾಸಕ ಬಿ.ಬಿ.ನಿಂಗಯ್ಯ
ಚಿಕ್ಕಮಗಳೂರು: ರಾಜಕೀಯ ಕ್ಷೇತ್ರದಲ್ಲಿ ನಿರಾಶೆಯಾಗುವ ಪ್ರಶ್ನೆಯೇ ಇಲ್ಲ. ಜನ ನಮ್ಮ ಚಲನವಲನಗಳನ್ನು ಗಮನಿಸುತ್ತಿರುತ್ತಾರೆ. ಜನತೆ ಒಂದಲ್ಲಾ ಒಂದು ದಿನ ನಮ್ಮೊಂದಿಗೆ ಕೈಜೋಡಿಸುತ್ತಾರೆ ಎಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಹೇಳಿದರು.
ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ರಾಷ್ಟ್ರೀಯ ವಕೀಲರ ಪರಿಷತ್ ಉಪಾಧ್ಯಕ್ಷ ಎಸ್.ಎಲ್. ಬೋಜೇಗೌಡರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿದ್ದವರಿಗೆ ತಾಳ್ಮೆ ಅಗತ್ಯ ಎಂದರು.
ಮುಂಬರುವ ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿ ಜಿಲ್ಲೆಯಲ್ಲಿ ಗೆಲ್ಲುವ ಶಪಥಮಾಡಿ. ಆಗ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಜನ ಒಲವು ತೋರುತ್ತಾರೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಎಲ್. ಭೋಜೇಗೌಡ, ಸ್ಟಾರ್ ಹೋಟೆಲ್‌ಗಳಲ್ಲಿ ನಡೆಯುವ ಅಭಿನಂದನಾ ಸಮಾರಂಭಕ್ಕಿಂತ ತವರು ಮನೆಯಲ್ಲಿ ನೀಡುವ ಆತ್ಮೀಯ ಸನ್ಮಾನ ಅಂತರಂಗದ ಗೌರವ ದೊಡ್ಡದು ಎಂದು ಹೇಳಿದರು.
ನನ್ನನ್ನು ನಂಬಿದವರ ಸಮಸ್ಯೆಗೆ ಸ್ಪಂದಿಸಲು ಸಾಧ್ಯವಾಗಿಲ್ಲ ಎಂಬ ಕೊರಗು ಕಾಡುತ್ತಿದೆ. ನಾನು ಬಯಸಿದ್ದು ಸಿಗಲು ಭಗವಂತನ ಆಶೀರ್ವಾದ ಅಗತ್ಯ ಎಂದರು.
ವಕೀಲರು ಪಕ್ಷಭೇದ ಮರೆತು ಆಶೀರ್ವದಿಸಿದ ಪರಿಣಾಮ ಸಂವಿಧಾನದ ಮೊದಲನೆ ಅಂಗದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿದೆ. ನಿಮ್ಮ ಪ್ರೀತಿ, ವಿಶ್ವಾಸ ಇರುವ ವರೆಗೂ ಆಶಾವಾದಿಯಾಗಿ ಬಡವರ ಕಷ್ಟಕ್ಕೆ ಸ್ಪಂದಿಸುತ್ತ ನಿಮ್ಮ ಋಣ ತೀರಿಸುವ ಕನಸಿದೆ ಎಂದರು. ಮಾಜಿ ಶಾಸಕ ಧರ್ಮೇಗೌಡ, ಜಿಲ್ಲಾಧ್ಯಕ್ಷ ಮಂಜಪ್ಪ, ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾ ಅಧ್ಯಕ್ಷ ಹೊಲದಗದ್ದೆ ಗಿರೀಶ್, ಮಹಿಳಾ ಘಟಕದ ಜಿಲ್ಲಾದ್ಯಕ್ಷೆ ಜ್ಯೋತಿ ಈಶ್ವರ್, ಅಲ್ಪಸಂಖ್ಯಾತ ವಿಭಾಗದ ಶಾಕೀರ್ ಹುಸೇನ್, ಕ್ಷೇತ್ರ ಸಮಿತಿ ಅಧ್ಯಕ್ಷ ಚಂದಯ್ಯ, ರಮೇಶ್, ಮುಖಂಡ ಭೈರೇಗೌಡ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

