ಚಿಕ್ಕಮಗಳೂರು

ಡೀಸೆಲ್, ರೈಲು ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Published On :

ಚಿಕ್ಕಮಗಳೂರು: ಡೀಸೆಲ್ ಮತ್ತು ರೈಲು ಪ್ರಯಾಣ ದರ ಏರಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಯುವ ಘಟಕದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಹಳೇ ತಾಲೂಕು ಕಚೇರಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ಪ್ರಧಾನಮಂತ್ರಿ ಮೋದಿ ಪ್ರತಿಕೃತಿ ದಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ಬೆಲೆ ಏರಿಕೆ ವಿರೋಧಿಸುತ್ತಲೆ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ತನ್ನ ಅಧಿಕಾರವಧಿ ಆರಂಭಿಸುತ್ತಿದ್ದಂತೆ ಡೀಸೆಲ್ ಮತ್ತು ರೈಲು ಪ್ರಯಾಣ ದರ ಏರಿಸುವ ಮೂಲಕ ಬಡಜನರಿಗೆ ಮೊದಲನೆ ಶಾಕ್ ನೀಡಿದೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ಚುನಾವಣೆಗೂ ಮುನ್ನ ಮೋದಿ ಅವರು ದೇಶಾದ್ಯಂತ ಭಾಷಣ ಮಾಡಿ, ಮುಗ್ದ ಜನರಿಗೆ ರಂಗುರಂಗಿನ ಕನಸು ಕಾಣುವಂತೆ ಮೋಡಿ ಮಾಡಿ ಒಮ್ಮೆಲೆ ದೇಶದ ಜನರಿಗೆ ಬೆಲೆ ಏರಿಕೆ ಶಾಕ್ ನೀಡಿದ್ದಾರೆ. ದರ ತಕ್ಷಣದಲ್ಲಿ ಇಳಿಸಿ ಬಡಜನರ ಹೊರೆ ಕಡಿಮೆ ಮಾಡದಿದ್ದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದಿಲ್ಲಿ ಚಲೋ ಕಾರ್ಯಕ್ರಮ ಹಮ್ಮಿಕೊಂಡು ಬಿಜೆಪಿಯ ಬಣ್ಣದ ಮಾತಿನ ಸತ್ಯವನ್ನು ಜನರ ಮುಂದೆ ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಶಿವಕುಮಾರ್ ಮಾತನಾಡಿದರು, ಮಹೇಶ್, ಶ್ರೀಧರ್ ಉರಾಳ್, ಕೆಂಪನಹಳ್ಳಿ ಮಂಜುನಾಥ್, ಸಂದೇಶ್, ಪ್ರಕಾಶ್, ಕಾರ್ತಿಕ್, ನಗರಸಭೆ ಸದಸ್ಯ ರೂಬಿನ್ ಮೋಸಸ್, ಎಚ್.ಎಸ್. ಪುಟ್ಟಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.