ಬಡವಿದ್ಯಾರ್ಥಿಗಳಿಗೆ ನೆರವಾಗಿ: ತಿಪ್ಪೇಶ್
ತರೀಕೆರೆ: ದಾನಿಗಳು ಬಡ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಲಿ ಎಂದು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ತಿಪ್ಪೇಶ್ ತಿಳಿಸಿದ್ದಾರೆ. ಇಲ್ಲಿಗೆ ಸಮೀಪದ ಎಂ.ಸಿ.ಹಳ್ಳಿ ಲಕ್ಷ್ಮಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 180 ವಿದ್ಯಾರ್ಥಿಗಳಿಗೆ ಉಚಿತವಾಗಿ ಸುಮಾರು 15000 ಬೆಲೆಯ ನೋಟ್‌ಬುಕ್‌ಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗುರುಮೂರ್ತಿ ಅಧ್ಯಕ್ಷತೆ ವಹಿಸಿ, ದಾನಿಗಳ ಉದಾರ ನೀತಿಯನ್ನು ಶ್ಲಾಘಿಸಿದರು. ವಿಜಯ ಬ್ಯಾಂಕ್‌ನ ನಿವೃತ್ತ ಪ್ರಾದೇಶಿಕ ವ್ಯವಸ್ಥಾಪಕ ಪ್ರವೀಣ್‌ಕಾಂತ್ ತಮ್ಮ ತಾಯಿ ಎಂ.ಕಾಂತಮ್ಮ ಅವರ ಅಪೇಕ್ಷೆಯಂತೆ ಉಚಿತವಾಗಿ ನೋಟ್ ಬುಕ್‌ಗಳನ್ನು ವಿತರಿಸಿದರು. ಸಭೆಯಲ್ಲಿ ಶಿಕ್ಷಕರು ಹಾಜರಿದ್ದರು.
ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ
ಚಿಕ್ಕಮಗಳೂರು: ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಜೂ. 25 ರಿಂದ ಜುಲೈ 1 ರವರೆಗೆ ನಡೆಯಲಿದೆ. ಪ್ರಾಥಮಿಕ ಶಾಲಾ ಎಲ್ಲಾ ಶಿಕ್ಷಕಕರ ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ಜೂ. 25 ಹಾಗೂ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಎಲ್ಲಾ ವಿಶೇಷ ಶಿಕ್ಷಕರ ಕೋರಿಕೆ ವರ್ಗಾವಣೆ ಜೂ. 28 ರಂದು ಕೌನ್ಸಿಲಿಂಗ್ ನಡೆಯಲಿದೆ. ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಕೋರಿಕೆ ವರ್ಗಾವಣೆ ಆದ್ಯತಾ ಕ್ರಮ.ಸಂ. 1 ರಿಂದ 200 ವರೆಗೆ ಜೂ. 29, ಆದ್ಯತಾ ಕ್ರ.ಸಂ. 201 ರಿಂದ 400 ವರೆಗೆ ಜೂ. 30 ರಂದು ಹಾಗೂ ಆದ್ಯತಾ ಕ್ರಮ.ಸಂ. 401 ರಿಂದ ಕೊನೆಯವರೆಗೆ ಜುಲೈ 1 ರಂದು ಕೌನ್ಸಿಲಿಂಗ್ ನಡೆಯಲಿದೆ. ಕೌನ್ಸಿಲಿಂಗ್ ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ರಾಮನಹಳ್ಳಿಯ ಡಯಟ್‌ನಲ್ಲಿ ಆನ್‌ಲೈನ್ ಮೂಲಕ ನಡೆಯಲಿದೆ. ವೈದ್ಯಕೀಯ ಪ್ರಮಾಣ ಪತ್ರ ನೀಡಿ ವರ್ಗಾವಣೆ ಬಯಸಿರುವ ಎಲ್ಲಾ ಶಿಕ್ಷಕರು ಜೂ. 28 ರಂದು ಬೆಳಿಗ್ಗೆ 9 ಗಂಟೆಗೆ ವೈದ್ಯಕೀಯ ತಪಾಸಣೆಗೆ ಡಯಟ್‌ನಲ್ಲಿ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಸ್ಸು ನಿಲ್ದಾಣ ಸರಿಪಡಿಸಲು ಆಗ್ರಹ
ಮೂಡಿಗೆರೆ: ತಾಲೂಕಿನ ಕೇಂದ್ರ ಬಿಂದು ಮೂಡಿಗೆರೆ ಬಸ್ಸು ನಿಲ್ದಾಣ ಕಾಮಗಾರಿ ಪ್ರಾರಂಭವಾಗಿ 2 ವರ್ಷ ಕಳೆದರೂ ಪೂರ್ಣಗೊಳ್ಳದೇ ಸಾರ್ವಜನಿಕರು ಪರದಾಡುವಂತಾಗಿದ್ದು, ಇನ್ನು ಒಂದು ವಾರದಲ್ಲಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ, ಬಸ್ಸು ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಅಧ್ಯಕ್ಷ ದಾರದಹಳ್ಳಿ ಪ್ರಸನ್ನ ತಿಳಿಸಿದ್ದಾರೆ.
ಜೇಸಿ ಭವನದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಗೌರವಾಧ್ಯಕ್ಷ ಹೊರಟ್ಟಿ ರಘು ಮಾತನಾಡಿ. ಜನರ ಅನುಕೂಲಕ್ಕೆಂದು ಬಸ್ಸು ಘಟಕ ತೆರೆಯಲಾಗಿದೆ. ಆದರೆ ಈ ಘಟಕ ಹೆಗ್ಗಣಗಳ ವಾಸಸ್ಥಾನದಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಎಂದರು. ಘಟಕದಲ್ಲಿರುವ ಹಳೆ ಬಸ್ಸು ಇನ್ನೆರಡು ದಿನಗಳಲ್ಲಿ ಸ್ಥಗಿತಗೊಳಿಸದೇ ಇದ್ದಲ್ಲಿ ಘಟಕಕ್ಕೆ ಬೀಗ ಹಾಕುವ ಎಚ್ಚರಿಕೆಯನ್ನು ನೀಡಿದ್ದಾರೆ. ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

