ಮೂಡಿಗೆರೆ: ಸರ್ಕಾರಿ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ
ಮೂಡಿಗೆರೆ: ಚಿನ್ನಿಗಾ-ಜನ್ನಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರವನ್ನು ಗ್ರಾಪಂ ಅಧ್ಯಕ್ಷೆ ರಮಿಜಾಬಾನು ಮಂಗಳವಾರ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.
ಈ ಸಮಯದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕಿರುಗುಂದ ಅಬ್ಬಾಸ್ ಮಾತನಾಡಿ, ಸರ್ಕಾರ ಬಡ ಮಕ್ಕಳಿಗೆ ಹಲವು ಸೌಕರ್ಯ ಒದಗಿಸುತ್ತಿದೆ. ಬಿಸಿಯೂಟ, ಕ್ಷೀರಭಾಗ್ಯ, ವಿಟಮಿನ್ಯುಕ್ತ ಮಾತ್ರೆ, ಸೈಕಲ್, ಪುಸ್ತಕ ವಿತರಿಸಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದೆ ಎಂದರು.
ಎಸ್ಡಿಎಂಸಿ ಸದಸ್ಯ ಸಿ.ವಿ. ಮಹೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿತವರು ಇಂದು ಜಗದ್ವಿಖ್ಯಾತಿ ಗಳಿಸಿಕೊಂಡಿದ್ದಾರೆ. ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಇಂದು ಸರ್ಕಾರಿ ಶಾಲೆಗಳಲ್ಲಿ ಕಲಿಕೆ ನಡೆಯುತ್ತಿದೆ. ಆದರೆ ಶಿಕ್ಷಕರ ಕೊರತೆ, ಕೆಲವೊಂದು ನ್ಯೂನತೆ ಸರಿಪಡಿಸಿದರೆ ಸರ್ಕಾರಿ ಶಾಲೆಗಳಿಂದ ಪೋಷಕರಿಗೆ ಹೊರೆಯಾಗುವುದಿಲ್ಲ ಎಂದರು. ಆಡಂಬರ ಮತ್ತು ಶ್ರೀಮಂತಿಕೆ ದೃಷ್ಟಿಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು. ಗ್ರಾಪಂ ಉಪಾಧ್ಯಕ್ಷ ಸಿ.ವಿ. ಸುದೀಪ್, ಶಿಕ್ಷಕ ಪ್ರೇಮ್ ಕುಮಾರ್, ಪುಟ್ಟಸ್ವಾಮಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

