'ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ ಬೇಕು'
ಚಿಕ್ಕಮಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 1952ರ ಗಣಿಗಾರಿಕೆ ಮತ್ತು ಖನಿಜ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಹಳೆ ಕಾಯ್ದೆ ಅನ್ವಯ ರು. 25ಸಾವಿರ ದಂಡ ವಿಧಿಸಲು ಅವಕಾಶ ಇದೆ. ಆದರೆ, ಪ್ರಸ್ತುತ ಆಸ್ತಿಯ ಮೌಲ್ಯ 10 ಪಟ್ಟು ಹೆಚ್ಚಾಗಿದೆ. ದಂಡ ಮತ್ತು ಶಿಕ್ಷೆಯನ್ನು ಹೆಚ್ಚಿಸಲು ಅಗತ್ಯತೆ ಇದ್ದು, ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೋರಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಲೋಕಾಯುಕ್ತರ ಅಧಿಕಾರ ಮತ್ತು ಸವಲತ್ತುಗಳು ಕುರಿತಂತೆ ಕೇಳಿದ ಪ್ರಶ್ನೆಗೆ ವಿಚಾರಣೆ ಮಂಜೂರಾತಿಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದ್ದು, ಲೋಕಾಯುಕ್ತ ಶಿಫಾರಸ್ಸು ಮಾಡುವ ಕೆಲಸವನ್ನಷ್ಟೇ ಮಾಡುತ್ತದೆ. ಕಾನೂನು ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ಹೆಚ್ಚೆಂದರೆ ಇನ್ನೊಂದು ತಿಂಗಳು ಕಾಲಾವಕಾಶ ಇರುತ್ತದೆ ಎಂದರು.
ಲೋಕಾಯುಕ್ತ ರಿಜಿಸ್ಟಾರ್ ಎಚ್.ಆರ್. ದೇಶಪಾಂಡೆ, ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ, ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್, ಲೋಕಾಯುಕ್ತ ಎಸ್ಪಿ ವೇದಮೂರ್ತಿ ಮೊದಲಾದವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

