ಯೋಗ, ವಿಜ್ಞಾನ ಋಷಿಮುನಿಗಳ ಬಳುವಳಿ
ನರಸಿಂಹರಾಜಪುರ: ಈಗಿನ ವೈದ್ಯಕೀಯ ಪದ್ಧತಿ, ವಿಜ್ಞಾನ, ಆರೋಗ್ಯ, ಶಿಲ್ಪಕಲೆ, ಸಂಗೀತ, ಸಾಹಿತ್ಯ ಮುಂತಾದ ಕಲೆಗಳು ಸಾವಿರಾರು ವರ್ಷಗಳ ಹಿಂದೆಯೇ ಪ್ರಾಚೀನ ಭಾರತದ ಋಷಿಮುನಿಗಳು ನೀಡಿದ ಬಳುವಳಿ ಆಗಿದೆ ಎಂದು ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ನ ಯೋಗ ಗುರು ಶಶಿಭೂಷಣ್ ತಿಳಿಸಿದರು.
ಇಲ್ಲಿನ ಗುರುಭವನದಲ್ಲಿ ಭಾನುವಾರ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಯುಕ್ತ ಆಶ್ರಯದಲ್ಲಿ 1 ವಾರಗಳ ಕಾಲ ನಡೆದ ಯೋಗ, ಧ್ಯಾನ, ಪ್ರಾಣಾಯಾಮ ಮತ್ತು ಸುದರ್ಶನ ಕ್ರಿಯೆಯ ಸಮಾರೋಪದಲ್ಲಿ ಅವರು ಮಾತನಾಡಿದರು.
ಆಧುನಿಕ ಯುಗದಲ್ಲಿ ಹೊಸ ಸಂಶೋಧನೆ ಕಂಡುಹಿಡಿದಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದೇವೆ. ಆದರೆ, ಈ ವಿಜ್ಞಾನವನ್ನು ನಮ್ಮ ಋಷಿಮುನಿಗಳು ಮೊದಲೇ ಕಂಡುಹಿಡಿದಿದ್ದರು. ಆಧುನಿಕ ಶೈಲಿಯಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಮಾಡಿ ನೆಮ್ಮದಿ ಕಳೆದುಕೊಳ್ಳುವುದಕ್ಕಿಂತ ನಮ್ಮ ಭವ್ಯ ಭಾರತದ ಪ್ರಾಚೀನವಾದ ಕಲೆಗಳಾದ ಯೋಗ, ಧ್ಯಾನ, ಪ್ರಾಣಾಯಾಮ ಮತ್ತು ಸುದರ್ಶನ ಕ್ರಿಯೆಯನ್ನು ಪ್ರತಿ ನಿತ್ಯ ಮಾಡಿದರೆ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಮನಸ್ಸು ಸಹ ಹತೋಟಿಯಲ್ಲಿ ಇಟ್ಟುಕೊಳ್ಳಬಹುದು ಎಂದರು.
ಸಭೆ ಅಧ್ಯಕ್ಷತೆಯನ್ನು ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ಅಧ್ಯಕ್ಷ ಅಕ್ಷತ್ ವಹಿಸಿದ್ದರು. ಕಾರ್ಯಕ್ರಮದ ನಿರ್ದೇಶಕ ಜೀವೇಂದ್ರಕುಮಾರ್, ಜೇಸಿ ಪದಾಧಿಕಾರಿಗಳಾದ ಅಭಿನವ ಗಿರಿರಾಜ್, ಮಂಜುನಾಥ ಎನ್. ಗೌಡ, ಪುರುಶೋತ್ತಮ್, ಪ್ರಶಾಂತಶೆಟ್ಟಿ, ಸುನೀಲ್, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 7 ದಿನಗಳ ಕಾಲ ನಡೆದ ಯೋಗ ಶಿಬಿರದಲ್ಲಿ 20 ಶಿಬಿರಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

