ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಆದ್ಯತೆ ನೀಡಲಿ
ಚಿಕ್ಕಮಗಳೂರು: ಶಿಕ್ಷಕರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳು ಉತ್ತಮ ಫಲಿತಾಂಶ ಹೊಂದುವ ಹಾಗೆ ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಕರೆ ನೀಡಿದ್ದಾರೆ.
ನಗರದ ರಾಮನಹಳ್ಳಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಯಟ್‌ನ ಸಭಾಂಗಣದಲ್ಲಿ ಬುಧವಾರ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಭೆಯಲ್ಲಿ ಶಿಕ್ಷಕರಿಗೆ ವರ್ಗಾವಣೆ ಆದೇಶ ಪತ್ರ ನೀಡಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಹಾಗೆ ಅವರನ್ನು ಪ್ರೋತ್ಸಾಹಿಸಬೇಕೆಂದರು.
ಸರ್ಕಾರ, ಶಿಕ್ಷಕರು ಒಳಗೊಂಡಂತೆ ಸರ್ಕಾರಿ ನೌಕರರಿಗೆ ಅನೇಕ ಅನುಕೂಲ ಮಾಡಿಕೊಡುತ್ತಿದೆ. ನಾವುಗಳು ಸಹ ಉತ್ತಮ ಕೆಲಸ- ಕಾರ್ಯ ಮಾಡಬೇಕೆಂದು ಕಿವಿಮಾತು ಹೇಳಿದರು.
ಕೌನ್ಸೆಲಿಂಗ್‌ನಲ್ಲಿ ಒಪ್ಪಿಗೆಯ ಮೇಲೆ ವರ್ಗಾವಣೆ ಹೊಂದಿದವರು ತಾವು ಕಾರ್ಯ ನಿರ್ವಹಿಸುವ ಶಾಲೆಗಳಲ್ಲಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ ಮಾತನಾಡಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಜೂ. 25 ರಿಂದ ಜುಲೈ 1 ರವರೆಗೆ ನಡೆಯಲಿದ್ದು, 58 ಜನರ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ನಡೆಯಿತು ಎಂದರು.
ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ಗೆ ಹಾಜರಾದ ಶಿಕ್ಷಕರಿಗೆ ವರ್ಗಾವಣೆ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ವಿತರಿಸಿದರು.
ವೇಳಾಪಟ್ಟಿ ಬದಲಾವಣೆ
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಜೂ. 25 ರಿಂದ ಜುಲೈ 1 ರವರೆಗೆ ನಡೆಯಲಿದ್ದು, ಜೂ. 29ರಂದು ಸಿಆರ್‌ಪಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಪ್ರಾಥಮಿಕ ಶಾಲಾ ವೃಂದದ ಮುಖ್ಯ ಶಿಕ್ಷಕರು, ಪದವೀಧರೇತರ ಶೀಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ವಿಶೇಷ ಶಿಕ್ಷಕರು ಮತ್ತು ಸಹ ಶಿಕ್ಷಕರ ಕೋರಿಕೆ ವರ್ಗಾವಣೆಯು ಆದ್ಯತಾ ಕ್ರ.ಸಂ. 1 ರಿಂದ 26 ರವರೆಗೆ, ಜೂ. 28 ರಂದು, ಕ್ರ.ಸಂ. 27 ರಿಂದ 275 ರವರೆಗೆ, ಜೂ. 30 ರಂದು ಹಾಗೂ ಕ್ರ.ಸಂ. 276 ರಿಂದ ಕೊನೆಯವರೆಗೆ ಜುಲೈ 1 ರಂದು ಕೌನ್ಸೆಲಿಂಗ್ ನಡೆಯಲಿದೆ.
ಕೌನ್ಸೆಲಿಂಗ್ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾಮನಹಳ್ಳಿಯ ಡಯಟ್‌ನಲ್ಲಿ ಆನ್‌ಲೈನ್ ಮೂಲಕ ನಡೆಯಲಿದೆ. ವೈದ್ಯಕೀಯ ಪ್ರಮಾಣ ಪತ್ರ ನೀಡಿ ವರ್ಗಾವಣೆ ಬಯಸಿರುವ ಎಲ್ಲಾ ಶಿಕ್ಷಕರು ಜೂ. 28ರಂದು ಬೆಳಗ್ಗೆ 9 ಗಂಟೆಗೆ ವೈದ್ಯಕೀಯ ತಪಾಸಣೆಗೆ ಡಯಟ್‌ನಲ್ಲಿ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

