ಚಿಕ್ಕಮಗಳೂರು

ತಾಪಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

Published On :

ಮೂಡಿಗೆರೆ: ಮೂಡಿಗೆರೆ ತಾಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸರ್ಕಾರದ ಆದೇಶದಂತೆ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹಂತೂರು ಕ್ಷೇತ್ರದಿಂದ ಚುನಾಯಿತರಾಗಿದ್ದ ಬಿಜೆಪಿಯ ನೇಪಾ ಆದಿತ್ಯ ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾಲೂಕು ಪಂಚಾಯಿತಿ ವ್ಯಾಪ್ತಿಗೆ ಬರುವ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯವನ್ನು ಜನರಿಗೆ ತಲುಪಿಸುವಲ್ಲಿ ಸರ್ವಸದಸ್ಯರ ವಿಶ್ವಾಸ ಪಡೆದು ಪ್ರಮಾಣಿಕ ಸೇವೆ ಸಲ್ಲಿಸುತ್ತೇನೆ ಎಂದರು.
ಜಿ.ಪಂ. ಸದಸ್ಯ ಅರೆಕೂಡಿಗೆ ಶಿವಣ್ಣ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಜನತೆ ಮೇಚ್ಚುವಂತೆ ಪಂಚಾಯಿತಿ ವಾಪ್ತಿಗೆ ಬರುವ ಎಲ್ಲಾ ಅನುದಾನವನ್ನು ಪಕ್ಷಾತೀತವಾಗಿ ಸದ್ಬಳಕೆ ಮಾಡಿಕೊಂಡು ಪಂಚಾಯಿತಿ ಸರ್ವ ಸದಸ್ಯರು ಮತ್ತು ಸಾರ್ವಜನಿಕರು ಮೆಚ್ಚುವಂತೆ ಕಾರ್ಯನಿರ್ವಹಿಸಬೇಕು ಎಂದರು.
ತಾಪಂ ನಿಕಟಪೂರ್ವ ಅಧ್ಯಕ್ಷ ಎಂ.ಎ.ಶೇಷಗಿರಿ ಮಾತನಾಡಿದರು. ಜಿ.ಪಂ ಸದಸ್ಯೆ ಜ್ಯೋತಿಹೇಮಶೇಕರ್, ತಾ.ಪಂ. ಸದಸ್ಯರಾದ ರಂಜನ್ ಅಜಿತ್‌ಕುಮಾರ್, ಎ.ಜೆ.ಸುಬ್ರಾಯಗೌಡ, ಸುಮಾಸುರೇಶ್, ಅಝಲಅಯೂಬ್, ಹೂವಮ್ಮ ತಾ.ಪಂ. ಸಹಾಯಕ ನಿರ್ದೇಶಕ ರಾಮಚಂದ್ರ, ಬಿಜೆಪಿ ಮುಖಂಡ ಎಂ.ಆರ್.ಜಗದೀಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.