ಚಿಕ್ಕಮಗಳೂರು

ಉಸ್ತುವಾರಿ ಸಚಿವರ ಬದಲಾವಣೆಗೆ ಆಗ್ರಹ

Published On :

ಕಡೂರು: ಜಿಲ್ಲೆಯ ಪರಿಚಯವಿರುವ ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಡ ರೈತರ ಸಂಕಷ್ಟ ತಿಳಿದಿರುವ ಜಿಲ್ಲೆಯ ಇಬ್ಬರು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಲ್ಲಿ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಬಯಲು ಪ್ರದೇಶದಲ್ಲಿ ಈ ವರ್ಷ ಮುಂಗಾರು ಮಳೆ ಕೈ ಕೊಟ್ಟು ರೈತರ ಬೆಳೆಗಳು ಬಾರದೆ ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಬೆಳೆ ಹಾಳಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿ ಅವರಿಗೆ  ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ನಿಟ್ಟಲ್ಲಿ ಕಾರ್ಯೋನ್ಮುಖರಾಗಬೇಕಿದೆ ಎಂದರು.
ಶಾಸಕ ದತ್ತ ಕಡೂರು ಪ್ರವಾಸಿ ಮಂದಿರ ಸ್ಥಳಾಂತರಿಸಿ ಆ ಜಾಗದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಈ ಆಸ್ಪತ್ರೆಯನ್ನು ಕಡೂರು, ಬೀರೂರು ಮಧ್ಯೆ ನಿರ್ಮಿಸಿದಲ್ಲಿ ಪಟ್ಟಣಗಳು ಸೇರಿದಂತೆ ಸುತ್ತಮುತ್ತಲಿನ ಜನರಿಗೆ ಹೆಚ್ಚು ಅನುಕೂಲವಾಗುವುದು. ಆದ್ದರಿಂದ ಪ್ರವಾಸಿ ಮಂದಿರ ಸ್ಥಳಾಂತರ ಬೇಡ ಎಂದು ಸಲಹೆ ನೀಡಿದರು.
ರೈತರ ಬೆಳೆ ಹಾಳಾಗಿರುವ ನಷ್ಟದ ಅಂದಾಜನ್ನು ಸರ್ಕಾರಕ್ಕೆ ಸಲ್ಲಿಸಿ ಬಯಲು ಪ್ರದೇಶದ ರೈತರಿಗೆ ಪರಿಹಾರ ಕೊಡಿಸುವಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.