ವಿಕಲಚೇತನರ ಕ್ರೀಡಾಕೂಟದಲ್ಲಿ 'ಆಶಾಕಿರಣ'
ಚಿಕ್ಕಮಗಳೂರು: ಉತ್ತರ ಆಫ್ರಿಕಾ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ವಿಕಲಚೇತನರ ಕ್ರೀಡಾಕೂಟ
ದಲ್ಲಿ ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಆಶಾಕಿರಣದ ವಿದ್ಯಾರ್ಥಿ ಎನ್. ಎಂ. ಮಂಜಪ್ಪ ಮೊದಲ ಸ್ಥಾನ ಗಳಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ. ಶಾಲೆಯ ಚಿನ್ನದ ಹುಡುಗನೆಂದೇ ಖ್ಯಾತಿ ಪಡೆದ ಜೆ.ಎಂ. ಶವಾದ್ ಉತ್ತರ ಆಫ್ರಿಕಾದ ಟುನೇಷಿಯಾದಲ್ಲಿ ಜರುಗಿದ ಐಪಿಸಿ ಗ್ಯ್ರಾಂಡ್ಫಿಕ್ಸ್ 2014 ಕ್ರೀಡಾಕೂಟದ 800 ಮೀಟರ್ ಓಟದಲ್ಲಿ ಕಂಚು ಮತ್ತು 400 ಮೀಟರ್ ಸ್ಪರ್ಧೆಯಲ್ಲಿ ರಜತ ಪದಕ ಪಡೆಯುವ ಮೂಲಕ ಏಷ್ಯಾಖಂಡದ ಮೊದಲ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾನೆ.
ಶವಾದ್ ಮತ್ತು ಮಂಜಪ್ಪ ಅವರನ್ನು ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಮಂಗಳವಾರ ಸಂಜೆ ಆತ್ಮೀಯವಾಗಿ ಅಭಿನಂದಿಸಲಾಯಿತು. ಇಬ್ಬರೂ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಆತ್ಮವಿಶ್ವಾಸ, ಛಲ, ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಶವಾದ್ ಮತ್ತು ಮಂಜಪ್ಪ ಸಾಕ್ಷಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶವಾದ್ ಮತ್ತು ಮಂಜಪ್ಪ ತಾವು ಕ್ರೀಡಾಕ್ಷೇತ್ರದಲ್ಲಿ ಎತ್ತರಕ್ಕೆ ಬೆಳೆಯಲು ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಅವರ ಸಹಾಯ ಮತ್ತು ಶಿಕ್ಷಕರ ನಿರಂತರ ಪ್ರೋತ್ಸಾಹ ಕಾರಣ ಎಂದರು.
ಲೇಖಕಿ ವಾಣಿ ಚಂದ್ರಯ್ಯ ನಾಯ್ಡು ಮಾತನಾಡಿದರು. ಶಾಲೆಯ ಉಪಾಧ್ಯಕ್ಷ ಕೆ.ಎ. ಈರೇಗೌಡ, ಸಹಕಾರ್ಯದರ್ಶಿ ಹೆಚ್.ಆರ್. ಹರೀಶ್, ಕಾರ್ಯದರ್ಶಿ ನಸ್ರುಲ್ಲಾ ಶರೀಫ್ ಉಪಸ್ಥಿತರಿದ್ದರು. ಶಿಕ್ಷಕ ಹೆಚ್.ಎಸ್. ಲಕ್ಷ್ಮೇಗೌಡ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಶಿಕ್ಷಕ ಬಿ.ಜಿ. ಚಂದ್ರಶೇಖರ್ ಸ್ವಾಗತಿಸಿದರು. ರವಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

