ಚಿಕ್ಕಮಗಳೂರು

'ಪ್ರಶ್ನೆ ಮಾಡಿಲ್ಲವೆಂಬ ಆರೋಪ ಸತ್ಯಕ್ಕೆ ದೂರ'

Published On :

ಮೂಡಿಗೆರೆ: ವಿಧಾನಸಭೆ ಚುನಾವಣೆ ಮುಗಿದು ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಆರಾಮವಾಗಿ ಒಂದು ದಿನವು ಕಳೆದಿಲ್ಲ. ಕ್ಷೇತ್ರದ ಹಲವು ಸಮಸ್ಯೆಗಳ ಬಗ್ಗೆ ಸದನದಲ್ಲಿ ನಡೆಯುವ ಎಲ್ಲಾ ಚರ್ಚೆಯಲ್ಲಿ ಭಾಗಿಯಾಗಿದ್ದೇನೆ. ಹೀಗಿದ್ದರೂ ಶಾಸಕರಾಗಿ ವಿಧಾನಸಭೆಯಲ್ಲಿ ಯಾವುದೇ ಪ್ರಶ್ನೆ ಕೇಳಿಲ್ಲ ಎಂಬ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳಸ ಇನಾಂ ಭೂಮಿ ಸಮಸ್ಯೆ ಕುರಿತುನಾಲ್ಕು ಭಾರಿ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ಎಂಜಿಎಂ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಬಗ್ಗೆ ಎರಡು ಬಾರಿ ಪ್ರಶ್ನಿಸಿದ್ದು, ರೈತರು, ಕಾರ್ಮಿಕರ ಪರವಾಗಿ ಪ್ರತಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ಎಚ್ಚರಿಸುತ್ತಿದ್ದೇನೆ ಎಂದರು.
  ಇನಾಂ ಸಂತ್ರಸ್ತರ ವಿಚಾರವಾಗಿ ಹೋರಾಟ ನಡೆಯುತ್ತಲೆ ಇದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಪಕ್ಷ ಹಾಗೂ ಸಂಘಟನೆಗಳ ಆಶ್ರಯದಲ್ಲಿ ಮೂಡಿಗೆರೆ ಪಟ್ಟಣ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಸರ್ಕಾರದಿಂದಲೇ ಮಂಜೂರಾಗಿರುವ 826 ಎಕರೆ ಇನಾಂ ಭೂಮಿ ತೆರವುಗೊಳಿಸಲು ಸಾಧ್ಯವೇ ಇಲ್ಲ ಎಂದರು.
 ಗಬ್ಬಳ್ಳಿ ಚಂದ್ರೇಗೌಡ, ವಿಜೇಂದ, ಲೋಹಿತ್, ಸಚಿನ್, ಸುರೇಂದ್ರ, ಲೋಹಿತ್, ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.