ಚಿಕ್ಕಮಗಳೂರು

ಅತ್ಯಾಚಾರ ಯತ್ನ: ಆರೋಪಿ ಸೆರೆ

Published On :

ಮೂಡಿಗೆರೆ: ತಾಲೂಕಿನ ಕಳಸ ಕಂಚಿನಕೆರೆ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋ ಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳಸ ಕಂಚಿನಕೆರೆಯಲ್ಲಿ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಪೊದೆಯೊಳಗೆ ಕರೆದುಕೊಂಡು ಹೋದ ಲಾರಿ ಕ್ಲೀನರ್ ಪ್ರಕಾಶ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದು, ಬಾಲಕಿ ಕೂಡಲೇ ಕೂಗಿಕೊಂಡಿದ್ದಾಳೆ. ಇದರಿಂದ ಹೆದರಿದ ಆರೋಪಿ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ.
ಬಾಲಕಿ ತಾಯಿ ಕೊಟ್ಟ ದೂರಿನನ್ವಯ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪೆಟ್ರೋಲ್ ಬಂಕ್‌ವೊಂದರ ಬಳಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಈ ಕುರಿತು ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.