ಚುನಾವಣಾ ಸಿದ್ಧತೆ: ಪೂರ್ವಭಾವಿ ಸಭೆ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಮಾ.2
ಲೋಕಸಭಾ ಚುನಾವಣೆಯ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ 2ನೇ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಮತಗಟ್ಟೆಗೆ ಸಿಬ್ಬಂದಿ ಹಾಗೂ ಮತಗಟ್ಟೆ ಅಧಿಕಾರಿಗಳ ಮಾಹಿತಿಯನ್ನು ಮಾನವ ಸಂಪನ್ಮೂಲ ನಿರ್ವಹಣೆಯ ಘಟಕದಿಂದ ಅಧಿಕಾರಿಗಳು ಹಾಗೂ ನೌಕರರ ಮಾಹಿತಿಯನ್ನು ಇನ್ನೆರಡು ದಿನಗಳಲ್ಲಿ ತಪ್ಪದೇ ನೀಡಬೇಕೆಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುಚ್ಛಕ್ತಿ, ಪೀಠೋಪಕರಣಗಳು ಹಾಗೂ ಶೌಚಾಲಯಗಳನ್ನೊಳಗೊಂಡಂತೆ ಇತರೆ ಅಗತ್ಯ ಮೂಲ ಸೌಕರ್ಯಗಳ ಬಗ್ಗೆ ಹಾಗೂ ಕಟ್ಟಡದ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ವರದಿ ಹಾಗೂ ಜಿಲ್ಲಾದ್ಯಂತ ಚೆಕ್ ಪೋಸ್ಟ್ಗಳ ನಿರ್ಮಾಣವನ್ನು ಯಾವ ಯಾವ ಸ್ಥಳಗಳಲ್ಲಿ ನಿರ್ಮಿಸಬೇಕೆಂದು ಸ್ಥಳ ನಿಗದಿಪಡಿಸಿ ಮಾಹಿತಿ ನೀಡಬೇಕೆಂದರು.
ಸೂಚನೆ: ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳ ವಿವರ ಹಾಗೂ ಮತಗಟ್ಟೆಗಳಿಗೆ ತೆರಳಲು ಅನುಗುಣವಾಗಿ ಅಗತ್ಯವಿರುವ ವಾಹನ ವ್ಯವಸ್ಥೆಯ ಬೇಡಿಕೆಯ ಪಟ್ಟಿ ಸಲ್ಲಿಸಲು ಸೂಚನೆ ನೀಡಿದರು.
ಚುನಾವಣಾ ಪ್ರಕ್ರಿಯೆಗಳ ಕಾರ್ಯದಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಿರುವುದು ಅವಶ್ಯಕವಾಗಿರುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ, ಉಪ ವಿಭಾಗಾಧಿಕಾರಿಗಳಾದ ಕೆ. ಚೆನ್ನಬಸಪ್ಪ, ಅನುರಾಧ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ, ತಹಸೀಲ್ದಾರ್ಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

