ವೈಚಾರಿಕ ಮನೋಭಾವ ಬೆಳೆಯಲಿ'
ಶೃಂಗೇರಿ: ಭೌತ ವಿಜ್ಞಾನ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿ, ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಹೆಸರು ಚಿರಸ್ಥಾಯಿಯಾಗಿರಿಸಿದ ಶ್ರೇಷ್ಠ ವಿಜ್ಞಾನಿ ಸಿ.ವಿ. ರಾಮನ್ ಸಂಶೋಧನೆ ರಾಮನ್ ಪರಿಣಾಮ ವಿಜ್ಞಾನ ಜಗತ್ತಿಗೆ ವಿಶಿಷ್ಟ ಕೊಡುಗೆ ಎಂದು ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಿವಕುಮಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಜಗದ್ಗುರು ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯಲ್ಲಿ ನಡೆದ ನಮ್ಮ ಬಳಿ ವಿಜ್ಞಾನ ವಿಶೇಷ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿ.ವಿ. ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತಿಯ ಸಾಧನೆ ಮಾಡಿ ಭೌತ ವಿಜ್ಞಾನ ಕ್ಷೇತ್ರದಲ್ಲಿ ನೊಬೆಲ್ ಪುರಸ್ಕಾರ ಪಡೆದ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸುತ್ತಮುತ್ತಲ ಸಮಸ್ಯೆಗಳ ಬಗ್ಗೆ ಪರೀಕ್ಷೆ, ವಿಶ್ಲೇಷಣೆ, ಪರಿಹಾರ ಕಂಡುಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ವಿದ್ಯಾರ್ಥಿಗಳು ತರಗತಿಗಳಲ್ಲಿ ಹೇಳಿರುವ ಅಂಶಗಳ ಜತೆಗೆ ಸ್ವಂತ ಯೋಚನೆ ಮಾಡಿ ಇನ್ನಷ್ಟು ಅಂಶ ಕಂಡುಕೊಳ್ಳಬೇಕು. ಇದರಿಂದ ವೈಚಾರಿಕ ಪ್ರಜ್ಞೆ ಇನ್ನಷ್ಟು ಹೆಚ್ಚುತ್ತದೆ ಎಂದರು.
ಶಾಲಾ ಮುಖ್ಯ ಶಿಕ್ಷಕ ಎಚ್.ಎನ್. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ವಿಜ್ಞಾನ ಶಿಕ್ಷಕಿ ವಿಜಯಲಕ್ಷ್ಮಿ ಮತ್ತಿತರರು ಇದ್ದರು. ವಿದ್ಯಾರ್ಥಿನಿ ಎಚ್.ಜೆ. ಕಾವ್ಯ ಅವರನ್ನು ಅಭಿನಂದಿಸಲಾಯಿತು. ನಾಗಶ್ರೀ ಸ್ವಾಗತಿಸಿ, ಅನನ್ಯ ನಿರೂಪಿಸಿ ರಾಹುಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

