'ಕಂಪ್ಯೂಟರ್ ಜ್ಞಾನ ಅಗತ್ಯ'
ಕನ್ನಡಪ್ರಭ ವಾರ್ತೆ ಟಿ ಶೃಂಗೇರಿ ಟಿ ಮಾ.2
ಆಧುನಿಕ ಜಗತ್ತಿನಲ್ಲಿ ಪ್ರತಿಬ್ಬರಿಗೂ ಕಂಪ್ಯೂಟರ್ ಜ್ಞಾನ ಅಗತ್ಯ ಎಂದು ಪಟ್ಟಣದ ಜೆಸಿ ಶಿಕ್ಷಣ ಸಂಸ್ಥೆಯ ಕಂಪ್ಯೂಟರ್ ಶಿಕ್ಷಕ ಕೆ.ಎಸ್. ರವಿಶಂಕರ್ ಹೇಳಿದರು.
ಸರ್ಕಾರಿ ಜೂನಿಯರ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಂಪ್ಯೂಟರ್ ಮಾಹಿತಿ ತಂತ್ರಜ್ಞಾನ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಎಲ್ಲಾ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಆವರಿಸಿಕೊಂಡಿದೆ. ಯಾವುದೇ ಅರ್ಜಿ, ಪತ್ರಗಳು ಆನ್‌ಲೈನ್ ಮೂಲಕವೇ ನಡೆಯುತ್ತಿದೆ. ಕಂಪ್ಯೂಟರ್ ನಿತ್ಯ ಜೀವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಬಳಕೆಯಾಗುತ್ತಿರುವ ಬಹುಪಯೋಗಿ ಉಪಕರಣವಾಗಿದೆ. ಕಂಪ್ಯೂಟರ್ ಕಲಿಕೆಯಿಂದ ಸ್ವಾವಲಂಬಿ ಬದುಕು ಸಾಗಿಸಲು ಸಹಕಾರಿ ಎಂದರು.
ಪ್ರಭಾರ ಮುಖ್ಯ ಶಿಕ್ಷಕಿ ನಾಗವೇಣಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿವಕುಮಾರ್, ಶಶಿಧರ್, ವೆಂಕಟೇಶ್‌ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಮುಕ್ತಾಯ ಇಂದು
ನರಸಿಂಹರಾಜಪುರ: ಸೀತೂರಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆ.28ರಿಂದ ಆರಂಭವಾಗಿರುವ ಪುನರ್ ಅಷ್ಚಬಂಧ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಾ.3ರಂದು ಮುಕ್ತಾಯಗೊಳ್ಳಲಿದೆ.
ಭಾನುವಾರ ಬೆಳಗ್ಗೆ ವಿಷ್ಣು ಗಾಯತ್ರಿ ಮಂತ್ರ ಹೋಮ, ವಾಯುಸ್ತುತಿ ಪುನಶ್ಚರಣಾ ಹೋಮ, ಚಕ್ರಾಬ್ಜ ಮಂಡಲ ಪೂಜೆ ನಡೆಯಿತು. ಸೋಮವಾರ ಬೆಳಗ್ಗೆಯಿಂದ ಬ್ರಹ್ಮ ಕಳಸಾಧಿವಾಸ, ತತ್ವ ಹೋಮ, ಪ್ರಧಾನ ಹೋಮ ನಡೆಯಲಿದೆ. ನಂತರ ಬ್ರಹ್ಮ ಕಳಸಾಭಿಷೇಕ, ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಮಹಾ ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.
ಶ್ರೀಗಳಿಂದ ಆಶೀರ್ವಾಚನ: ಸೋಮವಾರ ಮಧ್ಯಾಹ್ನ 3 ಗಂಟೆಗೆ ಬಾಳಗಾರು ಆರ್ಯ ಅಕ್ಷೋಭ್ಯತೀರ್ಥ ಮಠದ ಪೀಠಾಧೀಶ್ವರರಾದ ಶ್ರೀರಘುಭೂಷಣ ತೀರ್ಥರಿಂದ ಆಶೀರ್ವಾಚನ ನಡೆಯಲಿದೆ. ರಾತ್ರಿ ದೀಪೋತ್ಸವ, ಸೀತೂರು ಜಾನಪದ ಯಕ್ಷಗಾನ ಕಲಾ ಮಂಡಳಿಯವರಿಂದ ಯಕ್ಷಗಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

