ಚಿಕ್ಕಮಗಳೂರು

'ಖಾಲಿ ಹುದ್ದೆ ಶೀಘ್ರ ಭರ್ತಿ'

Published On :

ಚಿಕ್ಕಮಗಳೂರು:  ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಾಗುವುದು ಎಂದು ರಾಜ್ಯ ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಮಾದರಿಯಲ್ಲಿ ವಿಧಾನಸೌಧದ ಬಳಿ ಸುಮಾರು 5 ಕೋಟಿ ವೆಚ್ಚದಲ್ಲಿ ಮೀಡಿಯಾ ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.


ಎಟಿಎಂನಲ್ಲಿ ಆತ್ಮಹತ್ಯೆ
ಆಯನೂರು: ಇಲ್ಲಿನ ತಾಂಡದ ತುಕಾರಾಂ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಕುಡಿದು ಚೋರಡಿಯ ಎಸ್‌ಬಿಐ ಎಟಿಎಂನಲ್ಲಿ ಮಲಗಿದ್ದ ಅವರನ್ನು ಯಾರೂ ಗಮನಿಸಿರಲಿಲ್ಲ. ಎಟಿಎಂ ಭದ್ರತೆ ಕೆಲಸ ಮಾಡುವವರು ಅನುಮನಾಸ್ಪದವಾಗಿ ಪರಿಶೀಲಿಸಿಲಿದಾಗ ವಿಷಯ ಗೊತ್ತಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.